Select Your Language

Notifications

webdunia
webdunia
webdunia
webdunia

ಡಿಕೆಶಿ ಆಪ್ತ ಕಾರ್ಯದರ್ಶಿ ಆಂಜನೇಯ, ಡ್ರೈವರ್ ತೀವ್ರ ವಿಚಾರಣೆ

ಡಿ.ಕೆ. ಶಿವಕುಮಾರ್
ಬೆಂಗಳೂರು, ರಾಮನಗರ ಮಾತ್ರವಲ್ಲ. ನವದೆಹಲಿಯಲ್ಲೂ ಡಿ.ಕೆ. ಶಿವಕುಮಾರ್`ಗೆ ಸಂಬಂಧಿತ ವ್ಯಕ್ತಿಗಳ ಮೇಲೆ ಐಟಿ ದಾಳಿ ನಡೆದಿದೆ. ಸಂಫ್ತಾರ್ ಜಂಗ್ ಎನ್`ಕ್ಲೇವ್`ನಲ್ಲಿರುವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೂ ದಾಳಿ ನಡೆದಿದೆ.

ನವದೆಹಲಿಯ ಕರ್ನಾಟಕ ಭವನದ ಡಿ.ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಆಂಜನೇಯ, ಡ್ರೈವರ್ ನಾಗರಾಜ್ ಮನೆಗಳ ಮೇಲೂ ದಾಳಿ ನಡೆದಿದೆ. ದಾಖಲೆ ಪತ್ರಗಳ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಹಣವನ್ನೂ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ದಾಳಿ ನಡೆಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 10 ವರ್ಷಗಳಿಂದ ಡಿ.ಕೆ. ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಆಂಜನೇಯ 2 ದಿನಗಳ ಹಿಂದಷ್ಟೇ ದೆಹಲಿಗೆ ಬಂದಿದ್ದರು. ಆಂಜನೇಯ ಎಲ್ಲಿಂದ ಬಂದರೂ ಎಂಬ ಬಗ್ಗೆಯೂ ವಿಚಾರಣೆ ನಡೆಯುತ್ತಿದೆ.

ಇತ್ತ, ಮೈಸೂರಿನಲ್ಲಿರುವ ಡಿ.ಕೆ. ಶಿವಕುಮಾರ್ ಮನೆ, ಡಿ.ಕೆ. ಶಿವಕುಮಾರ್.ಟಿ. ನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜ್ಯೋತಿಷಿಗಳ ನಿವಾಸದ ಮೇಲೂ ದಾಳಿ ನಡೆದಿದೆ ಎನ್ನಲಾಗಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಕಾರ್ಯಕರ್ತರ ಧರಣಿ: ಮೋದಿ, ಅಮಿತ್ ಶಾ ಪ್ರತಿಕೃತಿ ದಹನ