ತಿರುವಾರೂರು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಡಿಎಂಕೆ ಮುಖ್ಯಸ್ಥ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಭರ್ಜರಿ ಜಯ ಸಾಧಿಸಿದ್ದಾರೆ.
ಕರುಣಾನಿಧಿ ತಮ್ಮ ಎದುರಾಳಿ ಅಭ್ಯರ್ಥಿಗಿಂತ 89 ಸಾವಿರ ಮತಗಳ ಅಂತರದಿಂದ ಜಯಗಳಿಸಿ ಮತ್ತೊಮ್ಮೆ ತಮ್ಮ ಜನಪ್ರಿಯತೆಯನ್ನು ಸಾಬೀತುಪಡಿಸಿದ್ದಾರೆ.
ಕರುಣಾನಿಧಿ ಪುತ್ರ ಸ್ಟಾಲಿನ್ ಕೂಡಾ ಕೊಳತ್ತೂರ್ ವಿಧಾನಸಭಾ ಕ್ಷೇತ್ರದಿಂದ ಜಯಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚುನಾವಣೆಯಲ್ಲಿ ಗೆಲ್ಲಲು ಕಾರಣರಾದ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ತಿಳಿಸಿದ್ದಾರೆ.
ವೆಬ್ದುನಿಯಾ
ಮೊಬೈಲ್ ಆಪ್ (ಡೌನ್ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.