Publish Date: Wed, 20 Mar 2019 (08:16 IST)
Updated Date: Wed, 20 Mar 2019 (08:18 IST)
ಚೆನ್ನೈ : ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಗೆ ಡಿಎಂಕೆ ಬಿಡುಗಡೆ ಮಾಡಿದ ಪ್ರಣಾಳಿಕೆಯಿಂದ ಇದೀಗ ತೀವ್ರ ಮುಜುಗರ ಉಂಟಾಗಿದೆ.
ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಅವರು ಈಗ ಚುನಾವಣೆಗಾಗಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ, ಅದರಲ್ಲಿ ಕಾಂಗ್ರೆಸ್ ಸೋನಿಯಾ ಗಾಂಧಿ ಪತಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಂದೆ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಿದವರನ್ನು ಬಿಡುಗಡೆ ಮಾಡುವುದಾಗಿ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ.
ಕಳೆದ 27 ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿರುವ ರಾಜೀವ್ ಹಂತಕರನ್ನು ಬಿಡುಗಡೆ ಮಾಡುವುದಾಗಿ ಡಿಎಂಕೆ ತಿಳಿಸಿದ್ದು ಇದೀಗ ಕಾಂಗ್ರೆಸ್ ಗೆ ಇರಿಸು ಮುರಿಸು ಉಂಟಾಗುವಂತಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.