Select Your Language

Notifications

webdunia
webdunia
webdunia
webdunia

ತಾಳಕ್ಕೆ ತಕ್ಕಂತೆ ಕುಣಿಯಬೇಡಿ: ಬ್ಯಾನರ್ಜಿ

ತಾಳಕ್ಕೆ ತಕ್ಕಂತೆ ಕುಣಿಯಬೇಡಿ: ಬ್ಯಾನರ್ಜಿ
ಕೊಲ್ಕತ್ತಾ , ಗುರುವಾರ, 24 ಫೆಬ್ರವರಿ 2022 (10:38 IST)
ಕೊಲ್ಕತ್ತಾ : ನವಾಬ್ ಮಲಿಕ್ ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕುವ ಮೂಲಕ ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯಬೇಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಶರದ್ ಪವಾರ್ಗೆ ಸಲಹೆ ನೀಡಿದರು.

ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಚಿವ ನವಾಬ್ ಮಲಿಕ್ ಅವರ ಅಕ್ರಮ ಹಣ ವಿನಿಮಯದ ಕುರಿತು ಸಂವಾದ ನಡೆಸಿದ್ದಾರೆ. ಫೋನ್ ಕರೆ ಮೂಲಕ ಮಾತನಾಡಿದ ಅವರು, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರು ತಮ್ಮ ಬೆಂಬಲ ಮತ್ತು ಒಗ್ಗಟ್ಟನ್ನು ಪ್ರದರ್ಶಿಸಿದ್ದಾರೆ.

ಶರದ್ ಪವರ್ ಮಾತನಾಡಿ, ನಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಸಿಬಿಐನಿಂದ ಬಂಧನಕ್ಕೊಳಗಾಗಿದ್ದ ಸಚಿವರನ್ನು ಅಮಾನತುಗೊಳಿಸಿದ್ದೀರಾ ಎಂದು ಮಮತಾ ಬ್ಯಾನರ್ಜಿ ಅವರ ಬಳಿ ಸಲಹೆಯನ್ನು ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 


Share this Story:

Follow Webdunia kannada

ಮುಂದಿನ ಸುದ್ದಿ

ಯುದ್ಧ ಸಾರಿದ ರಷ್ಯಾ!