Webdunia - Bharat's app for daily news and videos

Install App

ಸರಿಯಾಗಿ ಮೇಕಪ್ ಮಾಡ್ಲಿಲ್ಲ ಅಂತ ಹೀಗೆ ಮಾಡೋದಾ?

Webdunia
ಗುರುವಾರ, 8 ಡಿಸೆಂಬರ್ 2022 (14:44 IST)
ಭೋಪಾಲ್: ವಧುವಿನ ಮೇಕಪ್ ಸರಿಯಾಗಿ ಮಾಡದ್ದಕ್ಕೆ ಬ್ಯೂಟಿ ಪಾರ್ಲರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ ವಿಚಿತ್ರ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ಬೆಳಕಿಗೆ ಬಂದಿದೆ.

ಡಿ.3 ರಂದು ವಧುವಿನ ಮದುವೆಯಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ಕುಟುಂಬಸ್ಥರು ಮೋನಿಕಾ ಮೇಕಪ್ ಸ್ಟುಡಿಯೋಕ್ಕೆ ಕರೆದೊಯ್ದಿದ್ದಾರೆ. ಪಾರ್ಲರ್ನಲ್ಲಿದ್ದ ಸಿಬ್ಬಂದಿ ವಧುವಿಗೆ ಕೆಟ್ಟದಾಗಿ ಮೇಕಪ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ವಧು ಬ್ಯೂಟಿ ಪಾರ್ಲರ್ನ ಮಾಲೀಕೆ ಮೋನಿಕಾ ಪಾಠಕ್ ಅವರಿಗೆ ಕರೆ ಮಾಡಿ ಮುಖದ ಅಂದ ಕೆಡಿಸಿದ್ದಕ್ಕೆ ಅಕ್ಷೇಪಿಸಿದ್ದಾಳೆ.

ಆದರೆ ಮೋನಿಕಾ ಅವಳಿಗೆ ಕ್ಷಮೆಯಾಚಿಸುವ ಬದಲು ವಧುವನ್ನು ನಿಂದಿಸಿದ್ದಾಳೆ. ಅಷ್ಟೇ ಅಲ್ಲದೇ ಜಾತಿ ನಿಂದನೆಯನ್ನು ಮಾಡಿದ್ದಾಳೆ. ಜೊತೆಗೆ ಮೇಕಪ್ನ ಹಣವನ್ನು ಮೊದಲೇ ಪಡೆದಿದ್ದಳು.

ಈ ಹಿನ್ನೆಲೆಯಲ್ಲಿ ಕೋಪಗೊಂಡ ವಧು ಹಾಗೂ ವಧುವಿನ ಕುಟುಂಬಸ್ಥರು ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಬ್ಯೂಟಿ ಪಾರ್ಲರ್ನ ಮಾಲೀಕರ ವಿರುದ್ಧ ದೂರು ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೋನಿಕಾಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments