Publish Date: Thu, 28 Feb 2019 (13:54 IST)
Updated Date: Thu, 28 Feb 2019 (13:56 IST)
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವಿನ ದಾಳಿಯ ಕುರಿತಾಗಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಮತ್ತೆ ಪ್ರಧಾನಿ ನರೇಂದ್ರ ಮೋದಿ ಕಾಲೆಳೆದು ಟ್ವೀಟ್ ಮಾಡಿದ್ದಾರೆ.
ಬುಧವಾರ ಬೆಳಗ್ಗೆ ಪಾಕಿಸ್ತಾನ ಯುದ್ಧ ವಿಮಾನಗಳು ಭಾರತದ ಗಡಿ ಪ್ರವೇಶ ಮಾಡಿ ದಾಳಿ ನಡೆಸಲು ಪ್ರಯತ್ನಿಸಿದ್ದು, ಪಾಕ್ ಯುದ್ಧ ವಿಮಾನಗಳನ್ನು ಹಿಂದಿಕ್ಕುವ ವೇಳೆ ಒಂದು ಮಿಗ್-21 ವಿಮಾನ ಪತನಗೊಂಡು ಕಮಾಂಡರ್ ಅಭಿನಂದನ್ ಪಾಕಿಸ್ತಾನದ ಸೈನ್ಯದ ವಶದಲ್ಲಿದ್ದಾರೆ.
ಈ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ರಮ್ಯಾ, ಪಾಕಿಸ್ತಾನ ಪ್ರತ್ಯುತ್ತರ ನೀಡಬಹುದು ಎಂಬ ವಿಚಾರ ನಿಮಗೆ ಗೊತ್ತಿರಲಿಲ್ಲವೆ? ನಿಮಗೆ ಗೊತ್ತಿದ್ದರೂ ನಿದ್ರಿಸುತ್ತಿದ್ದೀರಾ? ನಮ್ಮನ್ನು ಉದ್ದೇಶಿಸಿ ಮಾತನಾಡುವುದು ಬಿಟ್ಟು ಆ್ಯಪ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೀರಿ. ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ಪೈಲಟ್ ಬಗ್ಗೆ ಒಂದೇ ಒಂದು ಟ್ವೀಟ್ ಸಹ ಮಾಡಿಲ್ಲ ಎಂದು ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.