Webdunia - Bharat's app for daily news and videos

Install App

ಮಗು ಏಕೆ ಕಪ್ಪಾಗಿದೆ ಎಂದು ಪತ್ನಿಯನ್ನೇ ಕೊಲೆ ಮಾಡೋದಾ!?

Webdunia
ಮಂಗಳವಾರ, 27 ಸೆಪ್ಟಂಬರ್ 2022 (07:46 IST)
ಅಮರಾವತಿ : ಪತ್ನಿ ಹಾಗೂ ತನ್ನ ಬಣ್ಣ ಬಿಳಿಯದ್ದಾಗಿದ್ದರೂ ಮಗುವಿನ ಬಣ್ಣ ಮಾತ್ರ ಏಕೆ ಕಪ್ಪಾಗಿದೆ ಎಂದು ಪತ್ನಿಯ ಶೀಲ ಶಂಕಿಸಿ ಪತಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.

ಒಡಿಶಾದ ಉಮ್ಮರ್ಕೋಟ್ನ ಸಿಲಾಟಿಗಾಂವ್ ಗ್ರಾಮದ ಮಾಣಿಕ್ ಘೋಷ್ ಇಂತಹದ್ದೊಂದು ಕೃತ್ಯ ಎಸಗಿದ್ದಾನೆ. ಈತನ ಕೃತ್ಯಕ್ಕೆ ಬಲಿಯಾದವರು ಕರಗಾಂವ್ ಗ್ರಾಮದ ಲಿಪಿಕಾ ಮಂಡಲ್.

ಮೊದಲು ಸಹಜ ಸಾವು ಎಂದೇ ಬಿಂಬಿತವಾಗಿದ್ದ ಈ ಸಾವಿನ ಪ್ರಕರಣ ನಂತರದಲ್ಲಿ ಕೊಲೆ ಎಂಬುದು ತಿಳಿದುಬಂದಿದೆ.

ಕಳೆದ 7 ವರ್ಷಗಳ ಹಿಂದೆ ಮಾಣಿಕ್ ಘೋಷ್ ಹಾಗೂ ಲಿಪಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ನಂತರ ಇಬ್ಬರೂ ಉದ್ಯೋಗಕ್ಕಾಗಿ ಆಂಧ್ರಪ್ರದೇಶದ ಕಾಕಿನಾಡಕ್ಕೆ ವಲಸೆ ಬಂದಿದ್ದರು.

ಎರಡೂವರೆ ವರ್ಷಗಳ ಹಿಂದೆ ಈ ದಂಪತಿಗೆ ಹೆಣ್ಣು ಮಗು ಹುಟ್ಟಿತ್ತು. ಆದರೆ ಇಬ್ಬರೂ ಬೆಳ್ಳಗಿದ್ದರೂ ಮಗು ಮಾತ್ರ ಏಕೆ ಕಪ್ಪಗೆ ಇದೆ ಎಂದು ಘೋಷ್ ಸದಾ ಪತ್ನಿಯ ಬಗ್ಗೆ ಸಂದೇಹಪಡುತ್ತಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಪತಿಯ ದೌರ್ಜನ್ಯದಿಂದ ಬೇಸತ್ತ ಲಿಪಿಕಾ ತನ್ನ ತವರು ಮನೆಗೆ ಬಂದಿದ್ದಳು. ನಂತರ ಕುಟುಂಬಸ್ಥರು ಇಬ್ಬರನ್ನೂ ಸಮಾಧಾನಪಡಿಸಿ ವಾಪಸ್ ಕಳುಹಿಸಿದ್ದರು. 

ಆದರೆ ಇದೇ ತಿಂಗಳ 18ರಂದು ರಾತ್ರಿ ಲಿಪಿಕಾಗೆ ಮೂರ್ಛೆ ಹೋಗಿರುವುದಾಗಿ ಹೇಳಿದ್ದ ಪತಿ, ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದ. ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದರು. ಮೊದಲು ಇದು ಸಹಜ ಸಾವು ಎನ್ನಲಾಗಿತ್ತು. ನಂತರ ಕುತ್ತಿಗೆಯಲ್ಲಿ ಗಾಯದ ಗುರುತು ಕಂಡುಬಂದಿದ್ದು ಸಂದೇಹಕ್ಕೆ ಎಡೆ ಮಾಡಿಕೊಟ್ಟಿತ್ತು.

ಪತಿಯೇ ಈ ಕೊಲೆ ಮಾಡಿದ್ದಾನೆ ಎಂಬ ಬಗ್ಗೆ ಪುರಾವೆಗಳು ಇರಲಿಲ್ಲ. ನಂತರ ಸಾಕ್ಷಿ ಹೇಳಿದ್ದೆ ಪುಟ್ಟ ಕಂದಮ್ಮ. ಅಮ್ಮನ ಸಾವಿನ ಬಳಿಕ ಅಜ್ಜಿ ಮನೆಗೆ ಬಂದಿದ್ದ ಎರಡೂವರೆ ವರ್ಷದ ಮಗು, ಅಜ್ಜ-ಅಜ್ಜಿಗೆ ಅಂದು ತಾನು ಕಂಡಿರುವ ದೃಶ್ಯ ವಿವರಿಸಿದೆ. ಅಮ್ಮನ ಗಂಟಲನ್ನು ಎರಡೂ ಕೈಗಳಿಂದ ಅಪ್ಪ ಹಿಡಿದುಕೊಂಡಿದ್ದು, ಅಮ್ಮ ಒದ್ದಾಡಿದ್ದು, ನಂತರ ಅಮ್ಮ ಏನೂ ಮಾತನಾಡದೇ ಇದ್ದುದನ್ನು ಮಗು ವಿವರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments