Select Your Language

Notifications

webdunia
webdunia
webdunia
webdunia

ಸಿಟಿ ಬಸ್ ನಲ್ಲಿ ಪ್ರಯಾಣಿಸಿದ ಸಿಂಪಲ್ ಸಿಎಂ ಯಾರು ಗೊತ್ತ?

ಸಿಟಿ ಬಸ್ ನಲ್ಲಿ ಪ್ರಯಾಣಿಸಿದ ಸಿಂಪಲ್ ಸಿಎಂ ಯಾರು ಗೊತ್ತ?
ಚೆನ್ನೈ , ಭಾನುವಾರ, 24 ಅಕ್ಟೋಬರ್ 2021 (10:30 IST)
ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶನಿವಾರ ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುವ ಮೂಲಕ ಅಚ್ಚರಿ ಮೂಡಿಸಿದರು.
ತಮ್ಮ ಬಸ್ ನಲ್ಲಿ ಮುಖ್ಯಮಂತ್ರಿಗಳನ್ನು ಕಂಡ ಸಾರ್ವಜನಿಕರು ಮತ್ತು ಸಾರಿಗೆ ಸಿಬ್ಬಂದಿ ಸಹ ಒಂದು ಕ್ಷಣ ಶಾಕ್ ಆಗಿದ್ದರು. ಚೆನ್ನೈನಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಸರ್ಕಾರದ ಉಚಿತ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರಿಂದ ಯೋಜನೆಯ ಅನುಕೂಲತೆ ಬಗ್ಗೆ ತಿಳಿದುಕೊಂಡರು. ಜೊತೆಗೆ ಇತರೆ ವಿಷಯಗಳ ಕುರಿತು ಚರ್ಚೆ ನಡೆಸಿ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಆರನೇ ಕೊರೊನಾ ಲಸಿಕಾಕರಣ ಅಭಿಯಾನದ ಭಾಗವಾಗಿ ಕನ್ನಗಿ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸ್ಟಾಲಿನ್ ಬಸ್ ನಲ್ಲಿಯೇ ಪ್ರಯಾಣಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ತಿಂಗಳ ಅಂತರದಲ್ಲಿ ಪತ್ನಿ, ಪ್ರಿಯತಮೆ ಕೊಂದ ಖತರ್ನಾಕ್ ಪತಿ!