ಅಸ್ಸಾಂ : ಪತಿಯ ಕಿರುಕುಳ ತಾಳಲಾರದೆ ಪತ್ನಿ ಪತಿಯ ಕತ್ತನ್ನು ಕತ್ತರಿಸಿ ಅದನ್ನು ತೆಗೆದುಕೊಂಡು ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಶರಣಾದ ಘಟನೆ ಅಸ್ಸಾಂನ ಲಕ್ಷ್ಮಿಮ್ಪುರ್ ಜಿಲ್ಲೆಯಲ್ಲಿ ನಡೆದಿದೆ.
55 ವರ್ಷದ ಮುದಿರಾಮ್ ಕೊಲೆಯಾದ ಪತಿ, 48 ವರ್ಷದ ಗುಣೇಶ್ವರಿ ಕೊಲೆಮಾಡಿದ ಪತ್ನಿ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಪತಿಯ ಕ್ರೂರ ವರ್ತನೆಯಿಂದ ಕೋಪಗೊಂಡ ಗುಣೇಶ್ವರಿ ಪತಿಯ ರುಂಡವನ್ನು ಕತ್ತರಿಸಿ, ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದಿದ್ದಾಳೆ.
ಆಕೆಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.