ಇಂಟರ್ನ್ ಶಿಪ್ ಗೆಂದು ಬಂದ ಎಲ್‍.ಎಲ್‍.ಬಿ. ವಿದ್ಯಾರ್ಥಿನಿಗೆ ವಕೀಲ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 28 ಏಪ್ರಿಲ್ 2019 (06:46 IST)
ಹೈದರಾಬಾದ್ : ಇಂಟರ್ನ್ ಶಿಪ್ ಮಾಡಲೆಂದು ಬಂದ ಎಲ್‍.ಎಲ್‍.ಬಿ. ವಿದ್ಯಾರ್ಥಿನಿಯ ಮೇಲೆ ವಕೀಲನೊಬ್ಬ ಅತ್ಯಾಚಾರ ಎಸಗಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ರಾಮಾ ರಾವ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿದ ವಕೀಲನಾಗಿದ್ದು, ಈತ ಹೈದರಾಬಾದ್ ನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ವಕೀಲ ವೃತ್ತಿ ನಡೆಸುತ್ತಿದ್ದ. ವಿದ್ಯಾರ್ಥಿನಿಯೊಬ್ಬಳು  ಇಂಟರ್ನ್ ಶಿಪ್ ಮಾಡಲೆಂದು ಈತನನ್ನು ಭೇಟಿಯಾಗಿದ್ದ ವೇಳೆ ಆಕೆಗೆ ತನ್ನ ವಿಸಿಟಿಂಗ್ ಕಾರ್ಡ್ ನೀಡಿ ಮತ್ತೊಮ್ಮೆ ಭೇಟಿ ಮಾಡುವಂತೆ ಹೇಳಿದ್ದಾನೆ. ಆಗ ಆತನನ್ನು ಭೇಟಿ ಮಾಡಲು ಮನೆಗೆ ಬಂದಾಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ.

 

ಅಷ್ಟೇ ಅಲ್ಲದೇ ಮತ್ತೆ ವಿದ್ಯಾರ್ಥಿನಿಯನ್ನು ಮನೆಗೆ ಕರೆದು ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ನಿರಾಕರಿಸಿದ್ದಕ್ಕೆ ಬೆದರಿಕೆ ಹಾಕಿದ್ದಾನೆ. ಪತಿಯ ನೀಚ ಕೃತ್ಯಕ್ಕೆ ಪತ್ನಿ ಕೂಡ ಸಹಾಯ ಮಾಡಿದ್ದಾಳೆ. ಈ ಬಗ್ಗೆ ವಿದ್ಯಾರ್ಥಿನಿ ವಕೀಲನ  ವಿರುದ್ಧ ಚಿಲ್ಕಲ್ ಗುಡ ಪೊಲೀಸರಿಗೆ ದೂರು ದಾಖಲಿಸಿದ್ದು,  ಆರೋಪಿ ವಿರುದ್ಧ ಅತ್ಯಾಚಾರ(378), ಜೀವಬೆದರಿಕೆ(506)ರ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments