ನವದೆಹಲಿ : ಲವ್ ಬ್ರೇಕ್ ಅಪ್ ಮಾಡಿದ್ದಕ್ಕೆ ಕೋಪಗೊಂಡ ಪ್ರಿಯತಮ ಸುತ್ತಿಗೆಯಿಂದ ಪ್ರೇಯಸಿಯ ತಲೆಗೆ ಹೊಡೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ನಿಶಾಂತ್ ಸೈನಿ (24)ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಸೈನಿ ಮತ್ತು ಯುವತಿ ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಆರೋಪಿ ಸೈನಿ ಮುಂಬೈನಲ್ಲಿ ಟಿವಿ ಧಾರಾವಾಹಿಗೆ ಆಡಿಶನ್ ಕೊಟ್ಟಿದ್ದೇನೆ ಎಂದು ಸುಳ್ಳು ಹೇಳಿದ್ದ. ಈ ವಿಚಾರ ಪ್ರೇಯಸಿಗೆ ತಿಳಿದು ನೀನು ಯಾವುದೇ ಕೆಲಸವನ್ನು ಹೊಂದಿಲ್ಲ ಎಂದು ಸೈನಿಯಿಂದ ದೂರವಾಗುವುದಾಗಿ ಹೇಳಿದ್ದಾಳೆ. ಇದರಿಂದ ಕೋಪಗೊಂಡ ಆರೋಪಿ ಸೈನಿ ಸುತ್ತಿಗೆಯಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ.
ತಕ್ಷಣ ಯುವತಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ. ಇತ್ತ ಆರೋಪಿಯ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ಸೈನಿಯನ್ನು ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.