Select Your Language

Notifications

webdunia
webdunia
webdunia
webdunia

ವಯನಾಡು ದುರಂತದ ಬಗ್ಗೆ ಲೋಕಸಭೆಯಲ್ಲಿ ಧ್ವನಿ ಎತ್ತಿದ ರಾಹುಲ್ ಗಾಂಧಿ ಏನಂದ್ರು ಗೊತ್ತಾ

ವಯನಾಡು ದುರಂತದ ಬಗ್ಗೆ ಲೋಕಸಭೆಯಲ್ಲಿ ಧ್ವನಿ ಎತ್ತಿದ ರಾಹುಲ್ ಗಾಂಧಿ ಏನಂದ್ರು ಗೊತ್ತಾ

Sampriya

ನವದೆಹಲಿ , ಬುಧವಾರ, 7 ಆಗಸ್ಟ್ 2024 (17:01 IST)
ನವದೆಹಲಿ: ಕೇರಳದ ವಯನಾಡಿನಲ್ಲಿ ಭೂಕುಸಿತದ ಕುರಿತು ಲೋಕಸಭೆಯಲ್ಲಿ ಬುಧವಾರ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇದನ್ನು "ರಾಷ್ಟ್ರೀಯ ವಿಪತ್ತು" ಎಂದು ಘೋಷಿಸಿ, ಸಂತ್ರಸ್ತರಿಗೆ ಸಮಗ್ರ ಪುನರ್ವಸತಿ ಪ್ಯಾಕೇಜ್ ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

"ಕೆಲವು ದಿನಗಳ ಹಿಂದೆ ನಾನು ನನ್ನ ಸಹೋದರಿಯೊಂದಿಗೆ ವಯನಾಡ್‌ಗೆ ಭೇಟಿ ನೀಡಿದ್ದೆ ಮತ್ತು ಈ ದುರಂತದಿಂದ ಉಂಟಾದ ವಿನಾಶ, ನೋವು ಮತ್ತು ಸಂಕಟವನ್ನು ಪ್ರತ್ಯಕ್ಷವಾಗಿ ನೋಡಿದೆ. 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಇಂದಿಗೂ ಅನೇಕ ಮಂದಿ ನಾಪತ್ತೆಯಾಗಿದ್ದಾರೆ. ಇದುವರೆಗೂ ಸಾವನ್ನಪ್ಪಿದವರ 400 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ  ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಈ ವೇಳೆ ಪ್ರದೇಶದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಲಾಖೆಗಳ ಕಾರ್ಯವನ್ನು ಕಾಂಗ್ರೆಸ್ ನಾಯಕರು ಶ್ಲಾಘಿಸಿದರು.

ಎಲ್ಲ ಸಮುದಾಯದವರು ಒಗ್ಗೂಡಿ ಸಹಾಯ ಮಾಡಿರುವುದು ಸಂತಸ ತಂದಿದೆ ಎಂದರು.

"ಸಮಗ್ರ ಪುನರ್ವಸತಿ ಪ್ಯಾಕೇಜ್ ಒದಗಿಸಬೇಕು, ಜನರು ಪಡೆಯುತ್ತಿರುವ ಪರಿಹಾರವನ್ನು ಹೆಚ್ಚಿಸಬೇಕು ಮತ್ತು ವಯನಾಡ್ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ನಾನು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ" ಎಂದು ರಾಹುಲ್ ಗಾಂಧಿ ಸಂಸತ್ತಿನ ಕೆಳಮನೆಯಲ್ಲಿ ಹೇಳಿದರು.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನೆ, ನೌಕಾಪಡೆ, ಕೋಸ್ಟ್ ಗಾರ್ಡ್, ಅಗ್ನಿಶಾಮಕ ಇಲಾಖೆ ಮತ್ತು ಇತರರ ಸಿಬ್ಬಂದಿಗಳೊಂದಿಗೆ ಕೇಂದ್ರ ಮತ್ತು ಕೇರಳ ರಾಜ್ಯ ಸರ್ಕಾರದ ಕಾರ್ಯವನ್ನು ಗಾಂಧಿಯವರು ಶ್ಲಾಘಿಸಿದರು ಮತ್ತು ಕರ್ನಾಟಕ, ತಮಿಳುನಾಡು ಮತ್ತು ತೆಲಂಗಾಣ ಸೇರಿದಂತೆ ನೆರೆಯ ರಾಜ್ಯಗಳ ಸಹಾಯವನ್ನು ಶ್ಲಾಘಿಸಿದರು.

ಕೇರಳದ ಭೂಕುಸಿತ ಪೀಡಿತ ವಯನಾಡ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ, ಸೇನೆ ಮತ್ತು ರಾಜ್ಯ ಅಧಿಕಾರಿಗಳು ಬುಧವಾರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕೇರಳದ ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಆಗಸ್ಟ್ 7 ರಂದು ಸತತ ಒಂಬತ್ತನೇ ದಿನಕ್ಕೆ ಕಾಲಿಟ್ಟಿವೆ.


Share this Story:

Follow Webdunia kannada

ಮುಂದಿನ ಸುದ್ದಿ

‘ನೀವು ನಮ್ಮ ದೇಶದ ಹೆಮ್ಮೆ‘: ವಿನೇಶ್‌ ಫೋಗಟ್‌ಗೆ ಧೈರ್ಯ ತುಂಬಿದ ಬಿಜೆಪಿ ನಾಯಕರು