ಮಗಳಿಗೆ ಎರಡನೇ ಮದುವೆ ಮಾಡಿಸಿದ ತಾಯಿಗೆ ಮೊದಲ ಪತಿ ಮನೆಯವರು ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 31 ಡಿಸೆಂಬರ್ 2018 (06:47 IST)
ಜೈಪುರ : ಗಂಡನನ್ನು ಬಿಟ್ಟು ಬಂದಿದ್ದ ಮಗಳಿಗೆ ಬೇರೊಬ್ಬ ವ್ಯಕ್ತಿಯ ಜೊತೆಗೆ ಮದುವೆ ಮಾಡಿಸಿದ ಕಾರಣಕ್ಕೆ ಮಗಳ ಮಾಜಿ ಪತಿಯ ಮನೆಯವರು ತಾಯಿಯ ಮೂಗು ಕತ್ತರಿಸಿದ ಘಟನೆ ರಾಜಸ್ಥಾನದ ಬಾಡ್ಮೇರ್ ಜಿಲ್ಲೆಯ ಧುಧು ಗ್ರಾಮದಲ್ಲಿ ನಡೆದಿದೆ.


ಗೆನಾನಿಂಯೊಂಕಾ ತಾಲಾ ಗ್ರಾಮದ ಭರೇರಾಮ್ ಹಾಗೂ ಪುರೋದೇವಿ ದಂಪತಿ ತಮ್ಮ ಮಗಳನ್ನು ನಾಲ್ಕು ವರ್ಷದ ಹಿಂದೆ ಲುಖು ಗ್ರಾಮದ ದರೇರಾಮ್ ಎಂಬಾತನೊಂದಿಗೆ ಮದುವೆ ಮಾಡಿಕೊಟ್ಟಿದ್ದರು. ಆದರೆ ಕೌಟುಂಬಿಕ ಕಲಹದ ಹಿನ್ನೆಲೆ ಮಗಳು ಗಂಡನ ಮನೆ ಬಿಟ್ಟು ತವರು ಮನೆಗೆ ಮರಳಿದ್ದಳು. ನಂತರ ಮಗಳಿಗೆ ಬುಚಾದ ಗ್ರಾಮದ ವ್ಯಕ್ತಿಯೊಬ್ಬನ ಜೊತೆಗೆ ಎರಡನೇ ಮದುವೆ ಮಾಡಿಸಿದ್ದಾರೆ.


ಈ ವಿಚಾರ ತಿಳಿದು ಮಗಳ ಮಾಜಿ ಪತಿ ಮನೆಯವರು ಭರೇರಾಮ್ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ತಡೆಯಲು ಮುಂದಾದ ಪುರೋದೇವಿಗೂ ಥಳಿಸಿ, ಮೂಗು ಕತ್ತರಿಸಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಪುರೋದೇವಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೇ ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments