ಸಂಕ್ರಾಂತಿ ಹಬ್ಬಕ್ಕೆ ಹಣ ಕೊಡಲಿಲ್ಲವೆಂದು ಪತಿ ಪತ್ನಿಗೆ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 15 ಜನವರಿ 2019 (09:50 IST)
ಚೆನ್ನೈ : ಸಂಕ್ರಾಂತಿ ಹಬ್ಬಕ್ಕೆ ಪತ್ನಿ ಹಣ ಕೊಡಲಿಲ್ಲ ಎಂದು ಕೋಪಗೊಂಡ ಪತಿ  ಆಕೆ ಮಲಗಿದ್ದ ವೇಳೆ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ತಮಿಳುನಾಡಿನ ಒಸಿಲಿಂಪಟ್ಟಿ ಗ್ರಾಮದ ಮಧುರೈ ಜಿಲ್ಲೆಯಲ್ಲಿ ನಡೆದಿದೆ.


ರಸಾತಿ(65) ಕೊಲೆಯಾದ ದುರ್ದೈವಿ. ರಾಮರ್(70) ಪತ್ನಿಯನ್ನೇ ಕೊಂದ ಪಾಪಿ ಪತಿ. ರಸಾತಿ ಕೇರಳದಲ್ಲಿ ದಿನಕೂಲಿ ಕೆಲಸ ಮಾಡಿಕೊಂಡು ತಿಂಗಳಿಗೆ ಒಮ್ಮೆ ಮನೆಗೆ ಬರುತ್ತಿದ್ದಳು. ಅಲ್ಲದೆ ತನ್ನ ದುಡಿಮೆಯಲ್ಲಿಯೇ ಕುಟುಂಬವನ್ನು ಸಾಕುತ್ತಿದ್ದಳು. ಆದರೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ತಮಿಳುನಾಡು ಸರ್ಕಾರ ದಿನಕೂಲಿ ಕಾರ್ಮಿಕರಿಗೆ ನೀಡಿದ 1 ಸಾವಿರ ರೂ. ಹಣದಲ್ಲಿ ಅರ್ಧ ಅಂದ್ರೆ 500 ರೂ. ತನಗೆ ಕೊಡು ಎಂದು ರಾಮರ್ ಪತ್ನಿಯನ್ನು ಕೇಳಿದ್ದಾನೆ. ಇದಕ್ಕೆ ಆಕೆ ಒಪ್ಪದಿದ್ದಾಗ ಕೋಪಗೊಂಡ ಆತ ರಾತ್ರಿ ಪತ್ನಿ ನಿದ್ರೆ ಮಾಡುತ್ತಿದ್ದ ವೇಳೆ  ಆಕೆಯ ಕತ್ತನ್ನು ಕೊಯ್ದು ಕೊಲೆ ಮಾಡಿದ್ದಾನೆ.


ಈ ಘಟನೆಯ ಬಳಿಕ ಆರೋಪಿ ರಾಮರ್ ತಾನೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ವಿಷಯ ತಿಳಿಸಿ ಶರಣಾಗಿದ್ದಾನೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು  ಮಹಿಳೆಯ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆಂದು ಕಳುಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments