ಚೆನ್ನೈ : ನಟ ಕಮಲಹಾಸನ್ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಎಂದು ಹೇಳುವುದರ ಮೂಲಕ ಹೊಸ ವಿವಾದವನ್ನ ಹುಟ್ಟುಹಾಕಿದ್ದಾರೆ.
ಈ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಹಿಂದೂ ಭಯೋತ್ಪಾದನೆ ಎಂಬ ಪದವನ್ನು ಹುಟ್ಟು ಹಾಕಿದ್ದೇ ಕಾಂಗ್ರೆಸ್ ಎಂಬ ಆರೋಪ ಮಾಡಿದ್ದರು. ಆದರೆ ಇದೀಗ ನಟ ಕಮಲಹಾಸನ್ ಈ ಬಗ್ಗೆ ಹೇಳಿಕೆ ನೀಡಿ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಮಲ್ ಹಾಸನ್, ಭಾರತದ ಮೊದಲ ಉಗ್ರ ಒಬ್ಬ ಹಿಂದೂ. ಆತನೇ ಮಹಾತ್ಮ ಗಾಂಧಿಯವರನ್ನು ಹತ್ಯೆಗೈದ ನಾಥುರಾಮ್ ಗೋಡ್ಸೆ. ತಾವು ಮುಸ್ಲಿಮರನ್ನು ಓಲೈಸಲು ಇದನ್ನು ಹೇಳುತ್ತಿಲ್ಲ. ಮಹಾತ್ಮ ಗಾಂಧಿಯವರ ಪ್ರತಿಮೆ ಬಳಿ ಇದನ್ನು ಹೇಳಿದ್ದೇನೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.