ರೆಸ್ಟೋರೆಂಟ್‌ಗೆ ಹೋಗಿದ್ದ ಸರ್ಜನ್ ಒಬ್ಬರನ್ನು ಥಳಿಸಿ ಅವರ ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹೇಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.
ರಾಜಗೌರಿ ಗಾರ್ಡನ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಗಂಗಾರಾಮ್ ಆಸ್ಪತ್ರೆಯಲ್ಲಿ ಸರ್ಜನ್ ಆಗಿರುವ ವ್ಯಕ್ತಿಯೊಬ್ಬರು ತಮ್ಮ ಪತ್ನಿ ಮತ್ತು ಮಗನ ಜತೆ ರೆಸ್ಟೋರೆಂಟ್‌ಗೆ ಹೋಗಿದ್ದರು. ವೈದ್ಯರು ಮತ್ತು ಮಗ ವಾಸ್ ರೂಮ್‌ಗೆ ಹೋದಾಗ ಬಾಗಿಲು ಮುಚ್ಚಿತ್ತು. ಬಹಳ ಹೊತ್ತಾದರೂ ಬಾಗಿಲು ತೆರೆಯದಿದ್ದಾಗ ಅವರು ಬಾಗಿಲು ಬಡಿದಿದ್ದಾರೆ. ಬಾಗಿಲು ತೆರೆದ ಮೂವರು ಅಲ್ಲಿ ಮದ್ಯ ಸೇವನೆ ಮಾಡುತ್ತಿದ್ದುದು ಕಂಡು ಬಂತು. ಅದಕ್ಕೇನು ಮಾತನಾಡದ ವೈದ್ಯರು ಶೌಚಾಲಯದೊಳಗೆ ಹೋಗಿ ಮರಳಿ ಬರುತ್ತಿದ್ದಾಗ ಮೂವರು ಅಸಭ್ಯವಾಗಿ ವರ್ತಿಸಿದ್ದಾರೆ. ಅದನ್ನು ವಿರೋಧಿಸಿದ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ವಿವಾದದಲ್ಲಿ ವೈದ್ಯರ ಪತ್ನಿ ಮಧ್ಯ ಪ್ರವೇಶಿಸಿದಾಗ ಆಕೆಯ ಮೇಲವರು ದೌರ್ಜನ್ಯವೆಸಗಿದ್ದಾರೆ.
ಘಟನೆ ನಡೆದ ಅರ್ಧ ಗಂಟೆಯ ಬಳಿಕ ಪೊಲೀಸರು ಸ್ಥಳಕ್ಕೆ ತಲುಪಿದರು ಎಂದು ವೈದ್ಯರು ಆರೋಪಿಸಿದ್ದಾರೆ.
ಭಾನುವಾರ ಘಟನೆ ನಡೆದಿದ್ದು ಮೂರು ದಿನಗಳ ಬಳಿಕ ಎಫ್ಐಆರ್ ದಾಖಲಾಗಿದೆ.
ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದರ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.