Webdunia - Bharat's app for daily news and videos

Install App

ವೈದ್ಯರನ್ನು ಥಳಿಸಿ ಪತ್ನಿ ಮೇಲೆ ರೆಸ್ಟೋರೆಂಟ್ ಶೌಚಾಲಯದಲ್ಲಿ ಲೈಂಗಿಕ ದೌರ್ಜನ್ಯ

Webdunia
ಶುಕ್ರವಾರ, 3 ಜೂನ್ 2016 (09:36 IST)
ರೆಸ್ಟೋರೆಂಟ್‌ಗೆ ಹೋಗಿದ್ದ ಸರ್ಜನ್ ಒಬ್ಬರನ್ನು ಥಳಿಸಿ ಅವರ ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹೇಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. 
 
ರಾಜಗೌರಿ ಗಾರ್ಡನ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಗಂಗಾರಾಮ್ ಆಸ್ಪತ್ರೆಯಲ್ಲಿ ಸರ್ಜನ್ ಆಗಿರುವ ವ್ಯಕ್ತಿಯೊಬ್ಬರು ತಮ್ಮ ಪತ್ನಿ ಮತ್ತು ಮಗನ ಜತೆ ರೆಸ್ಟೋರೆಂಟ್‌ಗೆ ಹೋಗಿದ್ದರು. ವೈದ್ಯರು ಮತ್ತು ಮಗ ವಾಸ್ ರೂಮ್‌ಗೆ ಹೋದಾಗ ಬಾಗಿಲು ಮುಚ್ಚಿತ್ತು.  ಬಹಳ ಹೊತ್ತಾದರೂ ಬಾಗಿಲು ತೆರೆಯದಿದ್ದಾಗ ಅವರು ಬಾಗಿಲು ಬಡಿದಿದ್ದಾರೆ. ಬಾಗಿಲು ತೆರೆದ ಮೂವರು ಅಲ್ಲಿ ಮದ್ಯ ಸೇವನೆ ಮಾಡುತ್ತಿದ್ದುದು ಕಂಡು ಬಂತು. ಅದಕ್ಕೇನು ಮಾತನಾಡದ ವೈದ್ಯರು ಶೌಚಾಲಯದೊಳಗೆ ಹೋಗಿ ಮರಳಿ ಬರುತ್ತಿದ್ದಾಗ ಮೂವರು ಅಸಭ್ಯವಾಗಿ ವರ್ತಿಸಿದ್ದಾರೆ. ಅದನ್ನು ವಿರೋಧಿಸಿದ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ವಿವಾದದಲ್ಲಿ ವೈದ್ಯರ ಪತ್ನಿ ಮಧ್ಯ ಪ್ರವೇಶಿಸಿದಾಗ ಆಕೆಯ ಮೇಲವರು ದೌರ್ಜನ್ಯವೆಸಗಿದ್ದಾರೆ. 
 
ಘಟನೆ ನಡೆದ ಅರ್ಧ ಗಂಟೆಯ ಬಳಿಕ ಪೊಲೀಸರು ಸ್ಥಳಕ್ಕೆ ತಲುಪಿದರು ಎಂದು ವೈದ್ಯರು ಆರೋಪಿಸಿದ್ದಾರೆ. 
 
ಭಾನುವಾರ ಘಟನೆ ನಡೆದಿದ್ದು ಮೂರು ದಿನಗಳ ಬಳಿಕ ಎಫ್ಐಆರ್ ದಾಖಲಾಗಿದೆ. 
 
ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದರ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. 


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ