Select Your Language

Notifications

webdunia
webdunia
webdunia
webdunia

ಮೂತ್ರಪಿಂಡದಿಂದ 206 ಕಲ್ಲುಗಳನ್ನು ಹೊರ ತೆಗೆದ ವೈದ್ಯರು!

ಮೂತ್ರಪಿಂಡದಿಂದ 206 ಕಲ್ಲುಗಳನ್ನು ಹೊರ ತೆಗೆದ ವೈದ್ಯರು!
ಹೈದರಾಬಾದ್ , ಶುಕ್ರವಾರ, 20 ಮೇ 2022 (14:17 IST)
ಹೈದರಾಬಾದ್ : ಶಸ್ತ್ರ ಚಿಕಿತ್ಸೆ ಮೂಲಕ ರೋಗಿಯೊಬ್ಬರ ಮೂತ್ರಪಿಂಡದಲ್ಲಿದ್ದ 206 ಕಲ್ಲುಗಳನ್ನು ಒಂದು ಗಂಟೆಯಲ್ಲಿಯೇ ತೆಲಂಗಾಣದ ಹೈದರಾಬಾದ್ನಲ್ಲಿರುವ ಅವೇರ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರು ತೆಗೆದು ಹಾಕಿದ್ದಾರೆ.

ಕಳೆದ ಆರು ತಿಂಗಳಿನಿಂದ ಎಡ ಭಾಗದ ಸೊಂಟದ ನೋವಿನಿಂದ ಬಳಲುತ್ತಿದ್ದ ನಲ್ಗೊಂಡ ನಿವಾಸಿ 56 ವರ್ಷದ ವೀರಮಲ್ಲ ರಾಮಲಕ್ಷ್ಮಯ್ಯ ಅವರಿಗೆ ಬೇಸಿಗೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿತ್ತು.

ಇದರಿಂದ ಏಪ್ರಿಲ್ 22 ರಂದು ವೀರಮಲ್ಲ ಅವರು ಅವೇರ್ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿದ್ದಾರೆ. ನಂತರ ಕೆಲವು ಔಷಧಿಗಳನ್ನು ತೆಗೆದುಕೊಳ್ಳುವಂತೆ ವೈದ್ಯರು ಸಲಹೆ ನೀಡಿದರು. ಅದರಿಂದ ಅಲ್ಪಾವಧಿಯ ಪರಿಹಾರ ಮಾತ್ರ ದೊರೆಯಿತು. ಆದರೆ ದಿನದಿಂದ ದಿನೇ ನೋವು ವಿಪರೀತಗೊಂಡಿತು. 

ನಂತರ ಅವೇರ್ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯ ಹಿರಿಯ ಸಮಾಲೋಚಕ ಮೂತ್ರಶಾಸ್ತ್ರಜ್ಞ ಡಾ.ಪೂಲಾ ನವೀನ್ ಕುಮಾರ್ ಅವರು, ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿದಾಗ ರೋಗಿಯ ಎಡ ಮೂತ್ರಪಿಂಡದಲ್ಲಿ ಕಲ್ಲುಗಳಿರುವುದು ಕಂಡು ಬಂದಿದೆ. ಕೊನೆಗೆ ಶಸ್ತ್ರಚಿಕಿತ್ಸೆ ಮಾಡಲು ನಿರ್ಧರಿಸಿದರು.

ಬಳಿಕ ಒಂದು ಗಂಟೆಯ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ 206 ಕಲ್ಲುಗಳನ್ನು ಹೊರಗೆ ತೆಗೆದುಹಾಕಿದ್ದಾರೆ. ನಂತರ ರೋಗಿಯ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆ ಎರಡೇ ದಿನಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಕಾರು: ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು