Select Your Language

Notifications

webdunia
webdunia
webdunia
webdunia

ಆಪರೇಷನ್ ನೆಪದಲ್ಲಿ ಎರಡೂ ಕಿಡ್ನಿ ಕದ್ದ ವೈದ್ಯರು!

ಆಪರೇಷನ್ ನೆಪದಲ್ಲಿ ಎರಡೂ ಕಿಡ್ನಿ ಕದ್ದ ವೈದ್ಯರು!
ಪಾಟ್ನಾ , ಸೋಮವಾರ, 12 ಸೆಪ್ಟಂಬರ್ 2022 (07:43 IST)
ಪಾಟ್ನಾ : ಹೊಟ್ಟೆನೋವೆಂದು ಚಿಕಿತ್ಸೆಗಾಗಿ ಖಾಸಗಿ ಕ್ಲಿನಿಕ್ಗೆ ದಾಖಲಾಗಿದ್ದ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡುವ ನೆಪದಲ್ಲಿ ವೈದ್ಯರು ಎರಡೂ ಕಿಡ್ನಿಗಳನ್ನು ಕದ್ದಿರುವ ಘಟನೆ ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆಯ ಆರೋಗ್ಯ ತೀವ್ರವಾಗಿ ಕ್ಷೀಣಿಸಿದ ಬಳಿಕ ಹೆಚ್ಚುವರಿ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಕಿಡ್ನಿ ತೆಗೆದಿರುವ ವಿಷಯ ತಿಳಿದುಬಂದಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮಹಿಳೆ ಕುಟುಂಬಸ್ಥರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಬರಿಯಾರ್ಪುರ ಠಾಣೆಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಂತ್ರಸ್ತ ಮಹಿಳೆ ಬಾಜಿರೌತ್ ಗ್ರಾಮದವರಾಗಿದ್ದು, ಮಹಿಳೆಯ ವೈದ್ಯಕೀಯ ವರದಿಗಳನ್ನು ನೀಡುವಂತೆ ಕುಟುಂಬಸ್ಥರನ್ನು ಕೇಳಿದಾಗ ಆಕೆಯ ಎರಡೂ ಕಿಡ್ನಿಗಳನ್ನು ತೆಗೆಯಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇದಕ್ಕೂ ಮುನ್ನ ರೊಚ್ಚಿಗೆದ್ದ ಮಹಿಳೆಯ ಕುಟುಂಬಸ್ಥರು ಕ್ಲಿನಿಕ್ ಮುಂಭಾಗದಲ್ಲೇ ಗಲಾಟೆ ಆರಂಭಿಸಿದ್ದರು. 

Share this Story:

Follow Webdunia kannada

ಮುಂದಿನ ಸುದ್ದಿ

ಪೋಲಿಯೊ : ತುರ್ತು ಪರಿಸ್ಥಿತಿ ಘೋಷಣೆ