ಹೈದರಾಬಾದ್: ಕೇರಳ ರಾಜ್ಯದ ಶಬರಿಮಲೆಗೆ ಭೇಟಿ ನೀಡುವ ಅಯ್ಯಪ್ಪ ಸ್ವಾಮಿ ಭಕ್ತರು ತಮ್ಮ ತೀರ್ಥಯಾತ್ರೆಯ ಸಮಯದಲ್ಲಿ ಯಾವುದೇ ಮಸೀದಿಗಳಿಗೆ ಹೋಗಬಾರದು ಎಂದು ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಕರೆ ನೀಡಿದ್ದಾರೆ.
ವೃತಧಾರಿಗಳು ಅಯ್ಯಪ್ಪ ದೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಲಾಧಾರಿಗಳು ಮಸೀದಿಗೆ ಹೋದರೆ ಅವರು ಅಶುದ್ಧರಾಗುತ್ತಾರೆ. ಭಕ್ತರನ್ನು ಮಸೀದಿಗೆ ಬರುವಂತೆ ಮಾಡಿರುವುದು ಷಡ್ಯಂತ್ರ ಎಂದು ಸಿಂಗ್ ಹೇಳಿದ್ದಾರೆ.
ತೆಲಂಗಾಣ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾದ ಎ. ರೇವಂತ್ ರೆಡ್ಡಿ ಮತ್ತು ಎನ್. ಚಂದ್ರಬಾಬು ನಾಯ್ಡು ಅವರು ಉಭಯ ರಾಜ್ಯಗಳ ಭಕ್ತರಿಗೆ ವಸತಿ ನಿರ್ಮಿಸಲು 10 ಎಕರೆ ಜಾಗವನ್ನು ಕೋರಿ ಕೇರಳ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಒತ್ತಾಯಿಸಿದ್ದಾರೆ.
ಗೋಶಾಮಹಲ್ ಕ್ಷೇತ್ರದ ಶಾಸಕರಾಗಿರುವ ರಾಜಾಸಿಂಗ್ ಹೇಳಿಕೆಯು ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿದೆ.