ಎಚ್‌ಡಿಕೆ ಶಸ್ತ್ರಚಿಕಿತ್ಸೆ ಬಗ್ಗೆ ಅನುಮಾನ: ಕೈ ಶಾಸಕನ ಹೇಳಿಕೆಗೆ ತಿರುಗೇಟು ಕೊಟ್ಟ ಡಾ ಮಂಜುನಾಥ್

Sampriya
ಭಾನುವಾರ, 31 ಮಾರ್ಚ್ 2024 (14:51 IST)
ರಾಮನಗರ: ಜೆಡಿಎಸ್‌ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಹೃದಯ ಶಸ್ತ್ರಚಿಕಿತ್ಸೆ ವೇಳೆ ನಾನು ಅಲ್ಲೇ ಇದ್ದೆ. ಆಧುನಿಕ ತಂತ್ರಜ್ಞಾನ ಬಳಸಿ ಕಾಲಿನ ರಕ್ತನಾಳದ ಮೂಲಕ ಹೃದಯದ ಕವಾಟ ಬದಲಾವಣೆ ಮಾಡಲಾಗಿದೆ. ಮಾಹಿತಿ ಇಲ್ಲದೆ ಯಾವುದರ ಬಗ್ಗೆಯೂ ಮಾತನಾಡಬಾರದು ಎಂದು  ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಹೇಳಿದರು.

ಕೆಲ ದಿನಗಳ ಹಿಂದೆ ಚುನಾವಣೆ ಬಂದ್ರೆ ಸಾಕು ಕುಮಾರಸ್ವಾಮಿ ಆಸ್ಪತ್ರೆ ಸೇರ್ತಾರೆ ಎನ್ನುವ ಮೂಲಕ, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಎಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಕುರಿತು ಅನುಮಾನ ವ್ಯಕ್ತಪಡಿಸಿದರು.


ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್ ಅವರು, 2007ರಲ್ಲಿ ಕುಮಾರಸ್ವಾಮಿ ಅವರಿಗೆ  ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಿ ಕವಾಟ ಜೋಡಿಸಲಾಗಿದೆ. 2017ರಲ್ಲಿ ಎರಡನೇ ಸಲ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದೀಗ ಮೂರನೇ ಸಲ ಆಧುನಿಕ ತಂತ್ರಜ್ಞಾನದ ಬಳಸಿ ಕಾಲಿನ ರಕ್ತನಾಳದ ಮೂಲಕ ಕವಾಟ ಬದಲಾಯಿಸಲಾಗಿದೆ ಎಂದರು.

ಬೆಂಗಳೂರಿನಲ್ಲೇ ಎಚ್‌ಡಿಕೆ ಅವರಿಗೆ ಶಸ್ತ್ರಚಿಕಿತ್ಸೆ ಮಾಡಬಹುದಾಗಿತ್ತು. ಆದರೆ, ಚುನಾವಣೆ ಸಂದರ್ಭದಲ್ಲಿ ಒತ್ತಡ ಹೆಚ್ಚಾಗುವ ಕಾರಣಕ್ಕೆ ಚೆನ್ನೈನಲ್ಲಿ ಮಾಡಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments