Select Your Language

Notifications

webdunia
webdunia
webdunia
Friday, 4 April 2025
webdunia

ವೃದ್ಧಾಪ್ಯದಲ್ಲೂ ವರದಕ್ಷಿಣೆ ಕಿರುಕುಳ!?

ಉತ್ತರ ಪ್ರದೇಶ
ಉತ್ತರ ಪ್ರದೇಶ , ಮಂಗಳವಾರ, 8 ಫೆಬ್ರವರಿ 2022 (14:54 IST)
ಲಕ್ನೋ : 78 ವರ್ಷದ ವೃದ್ಧೆಯೊಬ್ಬಳಿಗೆ 82ರ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಠಾಣೆಯ ಮೇಟ್ಟಿಲೇರಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
 

ಉತ್ತರ ಪ್ರದೇಶದ ಕಾನ್ಪುರದ ಚಕೇರಿ ಪ್ರದೇಶದಲ್ಲಿ ವೃದ್ಧ ಪತಿ, ಪತ್ನಿಗೆ ಕಿರುಕುಳ ನೀಡುತ್ತಿದ್ದಾನೆ. ಸಂತ್ರಸ್ತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಆಕೆಯ ದೂರಿನ ಮೇರೆಗೆ ಪೊಲೀಸರು ವೃದ್ಧೆಯ ಪತಿ ಗಣೇಶ್ ನರೇನ್ ಶುಕ್ಲಾ ಮತ್ತು ಅವರ ಅಳಿಯ ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

 
ವೃದ್ಧೆಯ ದೂರಿನ ಪ್ರಕಾರ, ಪತಿ ವರದಕ್ಷಿಣೆ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಹೇಳಲಾಗಿದೆ. ಪತಿಯ ಕಾಟ ತಾಳದ ವೃದ್ಧೆ ಪೊಲೀಸ್ ಠಾಣೆಯ ಮೊರೆ ಹೋಗಿದ್ದಾರೆ. ಇನ್ನು ಪತಿ ನರೇನ್ ಶುಕ್ಲಾ ಆತನ ಅಳಿಯ ಸೇರಿದಂತೆ ಒಟ್ಟು ಆರು ಜನರ ಮೇಲೆ ಕೇಸ್ ದಾಖಲಿಸಿದ್ದಾರೆ.

 
ವೃದ್ಧ ದಂಪತಿಯ ಪುತ್ರ ರಜನೀಶ್ ಸುದ್ದಿಗಾರರೊಂದಿಗೆ ಮಾತನಾಡಿ, ತನ್ನ ತಾಯಿ ಎಲ್ಲಾ ಕುಟುಂಬ ಸದಸ್ಯರೊಂದಿಗೆ ಚೆನ್ನಾಗಿ ವರ್ತಿಸುತ್ತಾಳೆ. ಆದರೆ ಕೆಲವು ಸಂಬಂಧಿಕರ ಪ್ರಭಾವದಿಂದ  ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ನಿಷೇಧಾಜ್ಞೆ ಜಾರಿ!?