Select Your Language

Notifications

webdunia
webdunia
webdunia
Saturday, 12 April 2025
webdunia

ಗೋವಾದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಾ. ಪ್ರಮೋದ್ ಸಾವಂತ್

ಪಣಜಿ
ಪಣಜಿ , ಮಂಗಳವಾರ, 19 ಮಾರ್ಚ್ 2019 (10:30 IST)
ಪಣಜಿ : ಗೋವಾ ಸಿಎಂ ಮನೋಹರ್ ಪರಿಕ್ಕರ್ ನಿಧನರಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿಯ ನಾಯಕ ಹಾಗೂ ಗೋವಾ ವಿಧಾನಸಭೆ ಸ್ಪಿಕರ್ ಡಾ. ಪ್ರಮೋದ್ ಸಾವಂತ್ ಅವರು ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.


ಗೋವಾ ಸಿಎಂ ಮನೋಹರ್ ಪರಿಕ್ಕರ್ ನಿಧನದ ಬಳಿಕ ಸರ್ಕಾರ ರಚನೆಯಲ್ಲಿ  ಬಿಕ್ಕಟ್ಟು ಸೃಷ್ಟಿಯಾಗಿದ್ದ ಹಿನ್ನಲೆಯಲ್ಲಿ ನಿನ್ನೆ ಸಂಜೆಯಿಂದಲೂ ಪಣಜಿಯಲ್ಲಿರುವ ಹೋಟೆಲ್ ವೊಂದರಲ್ಲಿ ಸಭೆ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ನಿತೀನ್ ಗಡ್ಕರಿ ಸೇರಿದಂತೆ ಹಿರಿಯ ನಾಯಕರು ಮುಖ್ಯಮಂತ್ರಿ ಆಯ್ಕೆಯಲ್ಲಿ ತೊಡಗಿದ್ದರು.


ಅಂತಿಮವಾಗಿ ಪ್ರಮೋದ್ ಸಾವಂತ್ ಅವರ ಆಯ್ಕೆಗೆ ಎಲ್ಲರ ಸಹಮತ ಸಿಕ್ಕಿದ್ದರಿಂದ ರಾಜಭವನದಲ್ಲಿ ಮಧ್ಯರಾತ್ರಿ ಎರಡು ಗಂಟೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರಮೋದ್ ಸಾವಂತ್ ಗೋವಾದ 11 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ದೇವೇಗೌಡರು ತುಮಕೂರಿನಿಂದ ಸ್ಪರ್ಧೆ ಮಾಡಿದರೆ ಸೋಲು ಗ್ಯಾರಂಟಿ ಎಂದು ಶಾಸಕ ಸುರೇಶ್ ಗೌಡ ಹೇಳುವುದರ ಹಿಂದಿರುವ ಕಾರಣವೇನು ಗೊತ್ತಾ?