Publish Date: Fri, 30 Apr 2021 (09:37 IST)
Updated Date: Fri, 30 Apr 2021 (09:38 IST)
ನವದೆಹಲಿ: ಕೊರೋನಾ ಸೋಂಕಿನಿಂದ ಗುಣಮುಖರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮನಮೋಹನ್ ಸಿಂಗ್ ಆರೋಗ್ಯ ಸುಧಾರಿಸಿದ್ದು, ಅವರಿಗೆ ಮತ್ತೆ ಜ್ವರ ಬಂದಿಲ್ಲ. ಅವರಿಗಾಗಿ ಪ್ರಾರ್ಥಿಸಿದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಭಾರತೀಯರಿಗೆ ಧನ್ಯವಾದ ಹೇಳಲು ಬಯಸುತ್ತೇವೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.
ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಮನಮೋಹನ್ ಸಿಂಗ್ ಏಪ್ರಿಲ್ 19 ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಗಮನಿಸಬೇಕಾದ ಅಂಶವೆಂದರೆ ಮಾರ್ಚ್ 4 ಮತ್ತು ಏಪ್ರಿಲ್ 3 ರಂದು ಮನಮೋಹನ್ ಸಿಂಗ್ ಕೊರೋನಾ ವ್ಯಾಕ್ಸಿನ್ ಪಡೆದುಕೊಂಡಿದ್ದರು.