ಚಹಾ ಕೊಟ್ಟು ಪ್ರಜ್ಞೆ ತಪ್ಪಿಸಿ ಪ್ರಿಯಕರನೊಂದಿಗೆ ಪರಾರಿ!

Webdunia
ಶುಕ್ರವಾರ, 24 ಡಿಸೆಂಬರ್ 2021 (08:09 IST)
ಲಕ್ನೋ : ಮದುವೆ ಮನೆಯ ಸಂಭ್ರಮದಲ್ಲಿ ಇದ್ದ ಮನೆ ಮಂದಿಗೆ ವಧು ಶಾಕ್ ನೀಡಿದ ಘಟನೆಯೊಂದು ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಚಹಾದಲ್ಲಿ ಪ್ರಜ್ಞೆತಪ್ಪಿಸುವ ಮದ್ದು ಬೆರೆಸಿದ ವಧು, ಮನೆಯಲ್ಲಿರುವ ಚಿನ್ನಾಭರಣದೊಂದಿಗೆ ತನ್ನ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದಾಳೆ.

ಡಿಸೆಂಬರ್ 18 ರಂದು ಮದುವೆ ನಿಗದಿಯಾಗಿತ್ತು. ಡಿಸೆಂಬರ್ 17 ರಂದು, ಮದುವೆಯ ಸಿದ್ಧತೆಯಲ್ಲಿ ನಿರತರಾಗಿದ್ದ ಕುಟುಂಬ ಸದಸ್ಯರೆಲ್ಲರಿಗೂ ಕುಡಿಯಲು ಚಹಾವನ್ನು ನೀಡಿದ್ದಾಳೆ. ಕುಟುಂಬಸ್ಥರೆಲ್ಲರೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ನಂತರ ಯುವತಿ ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾಳೆ.

ಮದುವೆಗೆ ಒಂದು ದಿನ ಬಾಕಿ ಇರುವಾಗ ಅವಳು ತನ್ನ ಪ್ರೇಮಿಯೊಂದಿಗೆ ಓಡಿಹೋಗಿದ್ದಾಳೆ. ಕುಟುಂಬಸ್ಥರು ಎಚ್ಚರಗೊಂಡು ನೋಡಿದ್ದಾಗ ವಧು  ಕಾಣದೆ ಇರುವುದರಿಂದ ಆತಂಕಗೊಂಡು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕುಟುಂಬದ ಕೆಲವರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಾರು 1.5 ಲಕ್ಷ ರೂಪಾಯಿ ಹಾಗೂ ಬೆಲೆಬಾಳುವ ಚಿನ್ನಾಭರಣಗಳೊಂದಿಗೆ ಯುವತಿ ಪರಾರಿಯಾಗಿದ್ದಾಳೆ ಎಂದು ವಧುವಿನ ಕುಟುಂಬಸ್ಥರು ಯುವತಿಯ ವಿರುದ್ಧ ವರ ವಂಚನೆ ಪ್ರಕರಣ ದಾಖಲಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments