Select Your Language

Notifications

webdunia
webdunia
webdunia
webdunia

ಬೆಳ್ಳಂಬೆಳಿಗ್ಗೆ ಬೆಚ್ಚಿದ ರಾಷ್ಟ್ರ ರಾಜಧಾನಿ: ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ

National Capital New Delhi, Chief Minister Rekha Gupta, Janaspandan program

Sampriya

ನವದೆಹಲಿ , ಬುಧವಾರ, 20 ಆಗಸ್ಟ್ 2025 (10:01 IST)
Photo Credit X
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಇಂದು ಬೆಳ್ಳಂಬೆಳ್ಳಿಗೆ ಬೆಚ್ಚಿಬಿದ್ದಿದೆ. ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆ.

ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮ ವೇಳೆ ಈ ಘಟನೆ ನಡೆದಿದೆ. 
35 ವರ್ಷದ ವ್ಯಕ್ತಿಯೊಬ್ಬ ಮುಖ್ಯಮಂತ್ರಿಯವರ ಬಳಿ ಕೆಲವು ದಾಖಲೆಗಳನ್ನು ಹಿಡಿದುಕೊಂಡು ಬಂದಿದ್ದು ಮಾತನಾಡುತ್ತಾ ನೋಡನೋಡುತ್ತಿದ್ದಂತೆ ಕಪಾಳಮೋಕ್ಷ ಮಾಡಿದ್ದಾನೆ. 

ರೇಖಾ ಗುಪ್ತಾ ಅವರ ಕೂದಲು ಸಹ ಎಳೆದಿದ್ದಾನೆ. ಘಟನೆಯಲ್ಲಿ ಸಿಎಂ ರೇಖಾ ಗುಪ್ತಾಗೆ ಯಾವುದೇ ಗಾಯಗಳಾಗಿಲ್ಲವಾದರೂ, ಅವರಿಗೆ ಆಘಾತವನ್ನುಂಟುಮಾಡಿದೆ.

ಘಟನೆಯನ್ನು ಬಿಜೆಪಿಯ ದೆಹಲಿ ಘಟಕದ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಅವರು ರೇಖಾ ಗುಪ್ತಾ ಅವರ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದರ್ ಯಾದವ್ ಅವರೂ ಖಂಡಿಸಿದ್ದಾರೆ, 

ಇಂದು ಜನ ಸುನ್ವೈ ಕಾರ್ಯಕ್ರಮ ವೇಳೆ ಸಿಎಂ ರೇಖಾ ಗುಪ್ತಾ ಅವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ. ಆರೋಪಿಯನ್ನು ದೆಹಲಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬೀದಿನಾಯಿಗಳಿಗೆ ಬಿರಿಯಾನಿ ಆಯ್ತು, ಈಗ ಬಿಬಿಎಂಪಿಯಿಂದ ಟ್ರೈನಿಂಗ್ ಭಾಗ್ಯ