Publish Date: Sat, 23 Jul 2022 (11:11 IST)
Updated Date: Sat, 23 Jul 2022 (12:13 IST)
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆಯೊಬ್ಬರ ಮನೆಯಿಂದ 20 ಕೋಟಿ ರೂ. ಹಣವನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ವಶಪಡಿಸಿಕೊಂಡಿದೆ.
ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ಇಡಿ ದಾಳಿ ನಡೆಸಿದೆ.
ಅರ್ಪಿತಾ ಮುಖರ್ಜಿ ಮನೆಯಿಂದ ವಶಪಡಿಸಿಕೊಳ್ಳಲಾದ 20 ಕೋಟಿ ಹಣ ಶಿಕ್ಷಕರ ನೇಮಕಾತಿ ಹಗರಣದಿಂದ ಬಂದಿರುವ ಆದಾಯ ಎಂದು ಶಂಕಿಸಲಾಗಿದೆ. ಭಾರೀ ಮೊತ್ತದ ಹಣವನ್ನು ಎಣಿಕೆ ಯಂತ್ರಗಳಿಂದ ಹಾಗೂ ಬ್ಯಾಂಕ್ ಅಧಿಕಾರಿಗಳ ನೆರವಿನಿಂದ ಎಣಿಸಲಾಗಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.
ಇಡಿ ರೇಡ್ ವೇಳೆ ಅರ್ಪಿತಾ ಮನೆ ಆವರಣದಿಂದ 20ಕ್ಕೂ ಹೆಚ್ಚು ಮೊಬೈಲ್ ಫೋನ್ಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಇಷ್ಟೊಂದು ಸಂಖ್ಯೆಯ ಮೊಬೈಲ್ ಫೋನ್ಗಳನ್ನು ಹೊಂದಿರುವ ಬಗೆಗಿನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ.
ಚಟರ್ಜಿ ಅವರೊಂದಿಗೆ, ರಾಜ್ಯ ಶಿಕ್ಷಣ ಸಚಿವ ಪರೇಶ್ ಸಿ ಅಧಿಕಾರಿ, ಶಾಸಕ ಮಾಣಿಕ್ ಭಟ್ಟಾಚಾರ್ಯ ಹಾಗೂ ಇನ್ನಿತರರ ಮೇಲೂ ಇಡಿ ದಾಳಿ ನಡೆಸಿದೆ.