Publish Date: Tue, 14 Jun 2022 (09:29 IST)
Updated Date: Tue, 14 Jun 2022 (09:43 IST)
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸಂಸದ ರಾಹುಲ್ ಗಾಂಧಿಗೆ ಸೋಮವಾರ ಸುಮಾರು 11 ಗಂಟೆಗಳ ಸುದೀರ್ಘ ವಿಚಾರಣೆ ಬಳಿಕವೂ ಇಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
ಇಡಿ ಸಮನ್ಸ್ ಹಿನ್ನೆಲೆ ಇಂದು ಬೆಳಗ್ಗೆ 11 ಗಂಟೆಗೆ ರಾಹುಲ್ ಗಾಂಧಿ ಅಧಿಕಾರಿಗಳ ಮುಂದೆ ಹಾಜರಾಗಲಿದ್ದಾರೆ.
ರಾಹುಲ್ ಗಾಂಧಿ ಹಲವು ಪ್ರಶ್ನೆಗಳಿಗೆ ಪಕ್ಷದ ಹಿರಿಯ ನಾಯಕರು ಹಾಗೂ ಸಂಬಂಧಿಸಿದ ಸಿಬ್ಬಂದಿ ಕೇಳಿ ಉತ್ತರಿಸುವುದಾಗಿ ಹೇಳಿದ್ದಾರೆ. ರಾಹುಲ್ ಗಾಂಧಿ ಉತ್ತರದಿಂದ ಸಮಾಧಾನ ಆಗದ ಇಡಿ ಅಧಿಕಾರಿಗಳು ಇಂದು ದಾಖಲೆಗಳ ಸಹಿತ ವಿಚಾರಣೆಗೆ ಬನ್ನಿ ಎಂದು ಸೂಚನೆ ನೀಡಿದ್ದಾರೆ.