Publish Date: Mon, 11 Apr 2022 (14:25 IST)
Updated Date: Mon, 11 Apr 2022 (14:26 IST)
ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜಾರಿ ನಿರ್ದೇಶನಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದ್ದು ವಿಚಾರಣೆ ಎದುರಿಸುವ ಸಾಧ್ಯತೆ ಇದೆ.
ನ್ಯಾಷನಲ್ ಹೆರಾಲ್ಡ್ ಹಗರಣದ ಹಿನ್ನೆಲೆಯಲ್ಲಿ ಸಮನ್ಸ್ ಜಾರಿಗೊಳಿಸಿದ್ದರಿಂದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಇಂದು ದೆಹಲಿಯ ಇಡಿ ಕಚೇರಿಯಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಇಂದು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ.
ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವರ ಹೆಸರು ಕೇಳಿ ಬಂದಿದ್ದು, ಅವರನ್ನು ಈಗಾಗಲೇ ವಿಚಾರಣೆಗೊಳಪಡಿಸಲಾಗಿದ್ದು, ಇದೀಗ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಚಾರಣೆಗೊಳಪಡಿಸಲಾಗಿದೆ.