ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮತ್ತೆ ಜಾರಿ ನಿರ್ದೇಶನಾಲಯದ ಟೆನ್ಷನ್ ಶುರುವಾಗಿದೆ.
ಜಾರಿ ನಿರ್ದೇಶನಾಲಯವು ಜುಲೈ 21ರಂದು ತನಿಖೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ವಿಚಾರಣೆಗೆ ಒಳಪಡಿಸಿದೆ.
ಇದೇ ಕಾರಣದಿಂದಾಗಿ ಜೂನ್ 23 ರಂದು ಸೋನಿಯಾ ಗಾಂಧಿ ಅವರು ಇಡಿ ಎದುರು ವಿಚಾರಣೆಗೆ ಹಾಜರಾಗಲು ಸಾಧ್ಯ ಆಗಿರಲಿಲ್ಲ. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.