Publish Date: Fri, 04 Aug 2023 (10:54 IST)
Updated Date: Fri, 04 Aug 2023 (00:29 IST)
ನವದೆಹಲಿ : ರಾಜ್ಯದ ಜಲ ವಿವಾದಗಳ ಬಗ್ಗೆ ಕಾನೂನು ತಂಡದ ವಕೀಲರ ಜೊತೆ ಚರ್ಚೆ ನಡೆಸಿದ್ದು ಸಾಧ್ಯವಾದಷ್ಟು ಬೇಗ ವಿವಾದಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಯಲ್ಲಿ ವಕೀಲರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರು ಹಂಚಿಕೆ ವಿವಾದ ಸಂಬಂಧ ಕಾನೂನು ತಜ್ಞರ ಸಭೆ ಮಾಡಲಾಗಿದೆ. ಈವರೆಗೂ ನಾವು ಅಂತಿಮ ನಿರ್ಣಯಕ್ಕೆ ಬಂದಿಲ್ಲ. ಮಹದಾಯಿ, ಕಾವೇರಿ, ಕೃಷ್ಣಾ ನದಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆ ವಿಚಾರವಾಗಿ ಮಾಹಿತಿ ಪಡೆದಿದ್ದೇನೆ.
ಉಳಿದ ವಿಚಾರವನ್ನು ಮುಖ್ಯಮಂತ್ರಿಗಳ ಬಳಿ ಚರ್ಚೆ ಮಾಡಲಾಗುತ್ತದೆ. ಬಳಿಕ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಉಳಿದ ನಿರ್ದೇಶನ ನೀಡಲಾಗುವುದು. ನಮಗೆ ಸಮಯ ವ್ಯರ್ಥ ಮಾಡಲು ಇಷ್ಟವಿಲ್ಲ. ಆದಷ್ಟು ಬೇಗ ಎಲ್ಲಾ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದಿದ್ದಾರೆ.