Webdunia - Bharat's app for daily news and videos

Install App

ಭ್ರಷ್ಟಾಚಾರವನ್ನು ಬೇರುಮಟ್ಟದಿಂದ ಕೀಳುತ್ತೇನೆ: ಪ್ರಧಾನಿ ಮೋದಿ ಗುಡುಗು

Webdunia
ಭಾನುವಾರ, 29 ಮೇ 2016 (10:23 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡು ವರ್ಷಗಳ ಅಧಿಕಾರವಧಿಯನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು, ಭ್ರಷ್ಟಾಚಾರವನ್ನು ಬೇರುಮಟ್ಟದಿಂದ ನಿರ್ಮೂಲನೆಗೊಳಿಸಿ, ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ಬದ್ಧ ಎಂದು ಘೋಷಿಸಿದ್ದಾರೆ.
 
ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸರಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದ್ದ 36 ಸಾವಿರ ಕೋಟಿ ರೂಪಾಯಿಗಳ ಮೂಲವನ್ನು ಪತ್ತೆ ಹಚ್ಚಿದೆ. ದೇಶ ಭ್ರಷ್ಟಾಚಾರದಿಂದ ಮುಕ್ತವಾಗಲೇಬೇಕು ಎಂದರು.
 
ಏಕ್ ನಹೀ ಸುಭಹ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರಕಾರದ ಉತ್ತಮ ಅಡಳಿತದಿಂದಾಗಿ ದೇಶದಲ್ಲಿ ಬದಲಾವಣೆ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.
 
ವಿಪಕ್ಷಗಳು ಕೇವಲ ರಾಜಕೀಯ ಕಾರಣಗಳಿಗಾಗಿ ಎನ್‌ಡಿಎ ಸರಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿವೆ. ಆರೋಪಗಳಲ್ಲಿ ಯಾವುದೇ ರೀತಿಯ ಸತ್ಯಾಂಶವಿಲ್ಲ ಎಂದು ಲೇವಡಿ ಮಾಡಿದರು.
 
ಕಾಂಗ್ರೆಸ್ ಪಕ್ಷವನ್ನು ಹೆಸರಿಸದೆ, ದೇಶದ ಪ್ರಮುಖ ವಿಪಕ್ಷ ಕೇವ ಲ ಅಭಿವೃದ್ಧಿಗೆ ತಡೆಯೊಡ್ಡಲು ಬಯಸುತ್ತಿದೆ. ಆದರೆ, ಜನತೆ ಸತ್ಯಾಸತ್ಯತೆಯನ್ನು ಅರಿತು ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗುಡುಗಿದರು.
 
ಕಲ್ಲಿದ್ದಲು ಹಂಚಿಕೆ ಸೇರಿದಂತೆ ಯುಪಿಎ ಸರಕಾರದಲ್ಲಿ ಹಗರಣಗಳ ಸರಮಾಲೆ ನಡೆದಿವೆ. ಹಿಂದಿನ ಸರಕಾರಕ್ಕೆ ಹೋಲಿಸಿದಲ್ಲಿ ಎನ್‌ಡಿಎ ಸರಕಾರ ಯಾವ ರೀತಿ ಕಾರ್ಯನಿರ್ವಹಿಸುತ್ತಿದೆ ಎನ್ನುವುದು ಜನತೆ ಅರಿತಿದ್ದಾರೆ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದರು. 
 
ಕಳೆದ 15 ದಿನಗಳ ಅವಧಿಯಲ್ಲಿ ಅಭಿವೃದ್ಧಿ ಮತ್ತು ವಿರೋಧವಾದದ ಮಧ್ಯೆ ಸಮರ ನಡೆಯುತ್ತಿದೆ. ಜನತೆ ಯಾವುದೇ ತಮಗೆ ಬೇಕು ಎನ್ನುವುದನ್ನು ಅವರೇ ನಿರ್ಧರಿಸುತ್ತಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments