Webdunia - Bharat's app for daily news and videos

Install App

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್‌ ಶಿಂಧೆ ರಾಜೀನಾಮೆ: ಯಾರಾಗುತ್ತಾರೆ ಮಹಾ ಸಾರಥಿ

Sampriya
ಮಂಗಳವಾರ, 26 ನವೆಂಬರ್ 2024 (15:12 IST)
Photo Courtesy X
ಮುಂಬೈ: ಮಹಾರಾಷ್ಟ್ರದಲ್ಲಿ ಈ ಬಾರಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳೆದ 2 ವರ್ಷ 5 ತಿಂಗಳಿಂದ ಮುಖ್ಯಮಂತ್ರಿಯಾಗಿದ್ದ ಏಕನಾಥ್ ಶಿಂಧೆ ಅವರು ಮಂಗಳವಾರ ರಾಜೀನಾಮೆ ಸಲ್ಲಿಸಿದರು. ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಜೋರಾಗಿದೆ.

ಹೊಸ ಸಿಎಂ ಪ್ರಮಾಣ ವಚನ ಸ್ವೀಕರಿಸುವ ವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಂತೆ ಶಿಂಧೆ ಅವರಿಗೆ ರಾಜ್ಯಪಾಲರು ಸೂಚಿಸಿದರು.
ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ ಶಿಂಧೆ ರಾಜಭವನಕ್ಕೆ ಭೇಟಿ ರಾಜೀನಾಮೆ ಸಲ್ಲಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದೆ.

ಬಿಜೆಪಿ, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ ಮಹಾಯುತಿ ಮೈತ್ರಿಕೂಟವು 288 ಸದಸ್ಯ ಬಲದ ವಿಧಾನಸಭೆಯಲ್ಲಿ 230 ಸ್ಥಾನಗಳೊಂದಿಗೆ ಭಾರಿ ಗೆಲುವು ಸಾಧಿಸಿದೆ. ಆದರೂ, ಮುಂದಿನ ಸಿಎಂ ಯಾರಾಗಬೇಕೆಂಬುದರ ಬಗ್ಗೆ ಆಡಳಿತಾರೂಢ ಒಕ್ಕೂಟದ ನಾಯಕರಲ್ಲಿ ಇದುವರೆಗೆ ಒಮ್ಮತ ಮೂಡಿಲ್ಲ.

ಮೈತ್ರಿಕೂಟದ ಮೂರು ಪಕ್ಷಗಳ ನಾಯಕರು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಜಾತಿ ಸಮೀಕರಣ, ಮರಾಠ, ಒಬಿಸಿ ಸಮುದಾಯಗಳನ್ನು ಗಮನದಲ್ಲಿಇಟ್ಟುಕೊಂಡು ಹೊಸ ನಾಯಕನ ಅಯ್ಕೆಗೆ ಬಿಜೆಪಿ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿರುವ ದೇವೇಂದ್ರ ಫಡ್ನವಿಸ್‌ ರೇಸ್‌ನಲ್ಲಿ ಮುಂದಿದ್ದಾರೆ

ಮೈತ್ರಿಕೂಟದಲ್ಲಿಅತ್ಯಧಿಕ 133 ಸ್ಥಾನ ಗಳಿಸಿರುವ ಬಿಜೆಪಿ ನಾಯಕರೇ ಮುಖ್ಯಮಂತ್ರಿ ಆಗಬೇಕು ಎಂಬುದು ಪಕ್ಷದ ನಾಯಕರಾದಿಯಾಗಿ ಸಂಘ ಪರಿವಾರದ ಆಶಯವಾಗಿದೆ. ಬಿಜೆಪಿ ಹಿರಿಯ ನಾಯಕ ದೇವೇಂದ್ರ ಫಡ್ನವಿಸ್‌ ಮುಖ್ಯಮಂತ್ರಿಯಾಗುವುದು ಬಹುತೇಕ ನಿಶ್ಚಿತ ಎನ್ನಲಾಗಿದೆ. ಫಡ್ನವಿಸ್‌ ಅವರನ್ನು ಸಿಎಂ ಮಾಡಲು ಮಿತ್ರಪಕ್ಷಗಳ ನಾಯಕರಾದ ಎನ್‌ಸಿಪಿಯ ಅಜಿತ್‌ ಪವಾರ್‌, ಶಿವಸೇನೆ ನಾಯಕರೂ ಆದ ಹಾಲಿ ಸಿಎಂ ಏಕನಾಥ್‌ ಶಿಂಧೆ ಒಪ್ಪಿಗೆ ಸೂಚಿಸಿದ್ದಾರೆಂದು ಬಿಜೆಪಿ ಮೂಲಗಳು ತಿಳಿಸಿವೆ.

ಹೊಸ ಸಂಪುಟದಲ್ಲಿ ಬಿಜೆಪಿಗೆ 24 ಸ್ಥಾನಗಳು ದೊರೆಯಲಿದ್ದು, ಉಳಿದಂತೆ ಶಿಂಧೆ ಬಣದ ಶಿವಸೇನೆಗೆ 12 ಹಾಗೂ ಅಜಿತ್‌ ಬಣದ ಎನ್‌ಸಿಪಿಗೆ 10 ಸ್ಥಾನಗಳು ಸಿಗಲಿವೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments