Webdunia - Bharat's app for daily news and videos

Install App

ವಿಶ್ವಾಸ ಪರೀಕ್ಷೆ ಗೆದ್ದ ಏಕನಾಥ್‌ ಶಿಂಧೆ!

Webdunia
ಸೋಮವಾರ, 4 ಜುಲೈ 2022 (14:01 IST)
ಮುಂಬೈ : ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟ ಕೊನೆಗೂ ಅಂತ್ಯವಾಗಿದೆ. ಸಿಎಂ ಏಕನಾಥ್ ಶಿಂಧೆ ಬಹುಮತ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ.
 
ಒಟ್ಟು ಬಿಜೆಪಿ ಮತ್ತು ಶಿವಸೇನೆ ಬಣದ ಒಟ್ಟು 164 ಶಾಸಕರು ಶಿಂಧೆ ಪರ ನಿಂತರೇ, 99 ಶಾಸಕರು ವಿರುದ್ಧವಾಗಿ ನಿಂತಿದ್ದಾರೆ. ಈ ಮೂಲಕ ಬಿಜೆಪಿ ಬೆಂಬಲಿತ ಶಿವಸೇನೆ ಬಂಡಾಯ ಸರ್ಕಾರ ಎರಡೂವರೆ ವರ್ಷದ ಬಳಿಕ ಅಧಿಕಾರ ಹಿಡಿದಿದೆ. 

ಎರಡು ದಿನಗಳ ಕಾಲ ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ, ಭಾನುವಾರದಂದು ಸ್ಪೀಕರ್ ಆಯ್ಕೆ ಮಾಡಲಾಗಿತ್ತು. ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಬಂಡಾಯ ಶಾಸಕರ ನೆರವಿನೊಂದಿಗೆ 164 ಮತಗಳನ್ನು ಗಳಿಸುವ ಮೂಲಕ ಸ್ಪೀಕರ್ ಆಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಶಿಂಧೆ ಬಹುಮತ ಸಾಬೀತಿಗೆ ಮತಗಳ ಕೊರತೆಯಾಗಲಿಲ್ಲ. 

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಕ್ಕೆ 145 ಮತಗಳ ಅವಶ್ಯಕತೆ ಇದ್ದು, ಓರ್ವ ಶಾಸಕನ ನಿಧನದಿಂದ ಇದು 144ಕ್ಕೆ ಇಳಿದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments