Publish Date: Thu, 14 Dec 2017 (19:15 IST)
Updated Date: Thu, 14 Dec 2017 (19:18 IST)
ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಗುಜರಾತ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೋಡ್ ಶೋ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳದ ಚುನಾವಣೆ ಆಯೋಗ ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಗುಜರಾತ್ ವಿಧಾನಸಭೆ ಚುನಾವಣೆ ಎರಡನೇ ಹಂತದ ಮತದಾನದ ವೇಳೆ ನರೇಂದ್ರಮೋದಿ ಅವರು ಮತ ಚಲಾಯಿಸಿದ ನಂತರ ರೋಡ್ ಶೋ ನಡೆಸಿ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಘ್ ಸುರ್ಜೇವಾಲಾ ಹೇಳಿದ್ದಾರೆ.
ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳದೆ ಚುನಾವಣೆ ಸಿಬ್ಬಂದಿಯು ಆಡಳಿತಾರೂಢ ಬಿಜೆಪಿಯ ಕೈಗೊಂಬೆಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.