Publish Date: Thu, 12 Oct 2017 (18:10 IST)
Updated Date: Thu, 12 Oct 2017 (18:16 IST)
ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಿದ ಕೇಂದ್ರ ಚುನಾವಣೆ ಆಯೋಗ, ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ವಿಪಕ್ಷಗಳ ಮುಖಂಡರು ಆರೋಪಿಸಿದ್ದಾರೆ.
ಗುಜರಾತ್ ರಾಜ್ಯದ ಚುನಾವಣೆ ದಿನಾಂಕ ಯಾಕೆ ಘೋಷಿಸಿಲ್ಲ ಎನ್ನುವ ಪ್ರತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಚುನಾವಣೆ ಆಯುಕ್ತ, ಗುಜರಾತ್ ಸರಕಾರ ವಿವಿಧಾನ ಕಾಮಗಾರಿಗಳನ್ನು ಹಮ್ಮಿಕೊಂಡಿದ್ದರಿಂದ ಕಾಲವಕಾಶ ನೀಡುವಂತೆ ಮನವಿ ಸಲ್ಲಿಸಿತ್ತು. ಗುಜರಾತ್ ಸರಕಾರದ ಮನವಿಯನ್ನು ಪುರಸ್ಕರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಒಂದು ವೇಳೆ ಇತರ ಸರಕಾರಗಳು ಮನವಿ ಮಾಡಿಕೊಂಡಲ್ಲಿ ಹಾಗೇ ಪುರಸ್ಕರಿಸುತ್ತೀರಾ? ಎನ್ನುವ ಪ್ರಶ್ನೆಗೆ ಕೇಂದ್ರ ಚುನಾವಣೆ ಆಯಕ್ತ ಎ.ಕೆ.ಜ್ಯೋತಿ ಉತ್ತರಿಸಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಿಮಾಚಲ ಪ್ರದೇಶದಲ್ಲಿ ನವೆಂಬರ್ 9 ರಂದು ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಸುಮಾರು 39 ದಿನಗಳ ನಂತರ ಮತ ಏಣಿಕೆ ನಡೆಯುವುದು ಕೂಡಾ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ವಿಪಕ್ಷಗಳ ನಾಯಕರು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.