Webdunia - Bharat's app for daily news and videos

Install App

ಲೋಕಸಭೆ ಚುನಾವಣೆ ದಿನಾಂಕ ನಾಳೆ ಪ್ರಕಟ

Krishnaveni K
ಶುಕ್ರವಾರ, 15 ಮಾರ್ಚ್ 2024 (12:44 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ ದಿನಾಂಕ ಯಾವಾಗ ಎಂಬ ಪ್ರಶ್ನೆಗಳಿಗೆ ನಾಳೆ ಉತ್ತರ ಸಿಗಲಿದೆ. ಚುನಾವಣಾ ಆಯೋಗ ನಾಳೆ ಲೋಕಸಭೆ ಚುನಾವಣೆ ನಡೆಯಲಿರುವ ದಿನಾಂಕ ಪ್ರಕಟಿಸಲಿದೆ.

ನಿನ್ನೆಯಷ್ಟೇ ಚುನಾವಣಾ ಆಯೋಗಕ್ಕೆ ಇಬ್ಬರು ನೂತನ ಮುಖ್ಯಸ್ಥರನ್ನು ನೇಮಿಸಲಾಗಿತ್ತು. ಕೇರಳ ಮೂಲದ ಜ್ಞಾನೇಶ್ ಕುಮಾರ್ ಮತ್ತು ಪಂಜಾಬ್ ಮೂಲದ ಸುಖಬೀರ್ ಸಿಂಗ್ ನೂತನ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಪ್ರಧಾನಿ ಮೋದಿ ನೇತೃತ್ವದ ಸಮಿತಿ ನೂತನ ಮುಖ್ಯಸ್ಥರನ್ನು ನೇಮಿಸಿತ್ತು.

ನಾಳೆ ಅಪರಾಹ್ನ 3 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ಆಯುಕ್ತರು ಲೋಕಸಭಾ ಚುನಾವಣೆ ದಿನಾಂಕ ಪ್ರಕಟಿಸಲಿದ್ದಾರೆ. ಇದನ್ನು ಸೋಷಿಯಲ್ ಮೀಡಿಯಾ, ಸುದ್ದಿವಾಹಿನಿಗಳು ಮತ್ತು ಯೂ ಟ್ಯೂಬ್ ಮುಖಾಂತರ ಲೈವ್ ಆಗಿ ವೀಕ್ಷಿಸಬಹುದಾಗಿದೆ.

ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೇ ಚುನಾವಣಾ ನೀತಿ ಸಂಹಿತೆಯೂ ಜಾರಿಯಾಗಲಿದೆ.  ಎರಡು ಹಂತಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಏಪ್ರಿಲ್ ನಲ್ಲಿ ಚುನಾವಣೆ ನಡೆಯುವ ಬಗ್ಗೆ ಸುಳ್ಳು ಸುದ್ದಿ ಹಬ್ಬಿತ್ತು. ಇದಕ್ಕೆ ಚುನಾವಣಾ ಆಯೋಗವೇ ಸ್ಪಷ್ಟನೆಯನ್ನೂ ನೀಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments