Webdunia - Bharat's app for daily news and videos

Install App

ಇಂದು ಗೋವಾ- ಪಂಜಾಬ್ ಚುನಾವಣೆ

Webdunia
ಶನಿವಾರ, 4 ಫೆಬ್ರವರಿ 2017 (08:33 IST)
ಇಂದು ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. 

ಮುಂಜಾನೆ 8 ರಿಂದಲೇ ಮತದಾನದ ಪ್ರಕ್ರಿಯೆ ಆರಂಭವಾಗಿದ್ದು, ಗೋವಾದ ರಾಜಧಾನಿ ಪಣಜಿಯಲ್ಲಿ ಮತ ಚಲಾಯಿಸಿದ ಬಳಿಕ ಮಾತನಾಡುತ್ತಿದ್ದ ಕೇಂದ್ರ ರಕ್ಷಣಾ ಸಚಿವ ಮನೋಹರ ಪರಿಕ್ಕರ್ ತಮ್ಮ ಪಕ್ಷ ಮರಳಿ ಅಧಿಕಾರಕ್ಕೇರುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. 
 
117 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪಂಜಾಬ್‌ನಲ್ಲಿ ಕಾಂಗ್ರೆಸ್ ಕ್ಯಾ. ಅಮರಿಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದೆ. ಬಿಜೆಪಿ ತೊರೆದು ಆಪ್ ಸೇರಿರುವ ಸಿಕ್ಸರ್ ಸಿಧು ವರ್ಚಸ್ಸು, ಮತಗಳನ್ನು ಸಳೆಯಲು ಕೇಜ್ರಿವಾಲ್ ಬಣಕ್ಕೆ ಎಷ್ಟರ ಮಟ್ಟಿಗೆ ಸಫಲವಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
 
ಆಡಳಿತಾರೂಢ ಬಿಜೆಪಿ- ಅಕಾಲಿದಳ  ಮೈತ್ರಿಕೂಟ ಹಾಲಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅವರನ್ನೇ ಸಿಎಂ ಅಭ್ಯರ್ಥಿ ಎಂದು ಘೋಷಿಸಿ ಅದೃಷ್ಟ ಪರೀಕ್ಷಿಸ ಹೊರಟಿದೆ.
 
'ಕೈ' ಮುರಿದು, 'ಕಮಲ'ವನ್ನು ಕಿತ್ತೊಗೆದು, ದೆಹಲಿಯಂತೆ ಪಂಜಾಬ್‌ನಲ್ಲೂ ಗದ್ದುಗೆ ಏರಲು ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ಆಪ್ ಭಗವಂತಮಾನ್ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಿದೆ. ಪಂಜಾಬ್ ರಾಜ್ಯದಲ್ಲಿ 1.98 ಮತದಾರರು ಮತದಾರರಿದ್ದು, 1,145 ಅಭ್ಯರ್ಥಿಗಳ ಭವಿಷ್ಯ ಇಂದು ಮತಪೆಟ್ಟಿಗೆಯನ್ನು ಸೇರಲಿದೆ. 
 
ಪಂಜಾಬ್‌ನಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದೂ ದೇಶಾದ್ಯಂತ ಕುತೂಹಲಕ್ಕೆ ಕಾರಣವಾಗಿದೆ.
 
ಗೋವಾ ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಿಗೆ 250 ಅಭ್ಯರ್ಥಿಗಳು ಕಣದಲ್ಲಿದ್ದು, ಅವರಲ್ಲಿ 57 ಮಂದಿ ಅಪರಾಧ ಹಿನ್ನೆಲೆಯುಳ್ಳವರಾಗಿದ್ದಾರೆ.ಕಾಂಗ್ರೆಸ್ 37 , ಎನ್ ಸಿಪಿ 16 ಮತ್ತು ಎಂಜಿಪಿ-ಜಿಎಸ್ಎಮ್-ಶಿವ ಸೇನಾ ಮೈತ್ರಿಕೂಟಗಳು 26 ಮಂದಿ, ಬಿಜೆಪಿ 36, ಆಮ್ ಆದ್ಮಿ ಪಕ್ಷ  39 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. 11 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, ರಾಜ್ಯಾದ್ಯಂತ 1,649 ಮತಗಟ್ಟೆಗಳಿವೆ.
 
ಗೋವಾದಲ್ಲಿ ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಎಂಜಿಪಿ ಮತ್ತು ಇತರರ ನಡುವೆ ಬಹುಕೋನ ಸ್ಪರ್ಧೆ ಇದೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಳೆಯ 500 ಮತ್ತು 1,000 ರೂಪಾಯಿ ನೋಟುಗಳ ನಿಷೇಧ ಮಾಡಿದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಇದು ಬಿಜೆಪಿಗೆ ಅಗ್ನಿ ಪರೀಕ್ಷೆ ಎಂದೇ ಹೇಳಬಹುದು. 
 
ಎರಡು ರಾಜ್ಯಗಳಲ್ಲಿ ಒಂದೇ ಹಂತದ ಚುನಾವಣೆ ನಡೆಯುತ್ತಿದ್ದು, ರಾಜ್ಯಗಳಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ. 
 
ಚುನಾವಣೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸಿ. ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಯುವಜನತೆಗೆ ಕರೆ ನೀಡಿದ್ದಾರೆ.
 
< > Election Day In Punjab, Goa As BJP Faces AAP, Congress Challenge< >

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Shahbaz Sharif: ರಾತ್ರಿ 2.30 ಕ್ಕೆ ಕಾಲ್ ಬಂತು: ಸತ್ಯ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಷರೀಫ್

Bengaluru Mangaluru Rail: ಬೆಂಗಳೂರು, ಮಂಗಳೂರು ರೈಲ್ವೇ ಪ್ರಯಾಣಿಕರ ಗಮನಕ್ಕೆ: ರೈಲುಗಳು ಕ್ಯಾನ್ಸಲ್

Boycott Turkey: ಬೆಂಗಳೂರಿನಲ್ಲಿ ಟರ್ಕಿ ಮಾರ್ಬಲ್ ಗೂ ನಿಷೇಧ

Indus Water treaty: ಸಿಂಧೂ ನದಿ ನೀರು ಬಿಡಿ ಎಂದ ಪಾಕಿಸ್ತಾನಕ್ಕೆ ಭಾರತ ಕೊಟ್ಟ ಉತ್ತರವೇನು ಗೊತ್ತಾ

Karnataka Weather: ಕೇರಳಕ್ಕೆ ಮುಂಗಾರು ಪ್ರವೇಶ ಯಾವಾಗ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments