Publish Date: Sat, 28 Oct 2017 (11:25 IST)
Updated Date: Sat, 28 Oct 2017 (11:27 IST)
ನವದೆಹಲಿ: ತವರು ರಾಜ್ಯದ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಧಾನಿ ಮೋದಿ ಭಾರೀ ಬ್ಯುಸಿಯಾಗಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ.
ಗುಜರಾತ್ ಚುನಾವಣೆ ಪ್ರಚಾರಕ್ಕಾಗಿ ನವಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಹಲವಾರು ಬಾರಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅದಲ್ಲದೆ, ಹಿಮಾಚಲ ಪ್ರದೇಶ ಚುನಾವಣೆ ಪ್ರಚಾರದಲ್ಲೂ ತೊಡಗಿಸಿಕೊಳ್ಳಲಿದ್ದಾರೆ.
ಇದರ ನಡುವೆ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೂ ಪ್ರಧಾನಿ ಮೋದಿ ಪಾಲ್ಗೊಳ್ಳಬೇಕಿದೆ. ಹೀಗಾಗಿ ವರ್ಷಾಂತ್ಯದವರೆಗೆ ಪ್ರಧಾನಿ ಮೋದಿ ದಿನ ಪೂರ್ತಿ ಕೆಲಸ ಮಾಡಿಕೊಳ್ಳಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ