Publish Date: Tue, 25 Jan 2022 (09:03 IST)
Updated Date: Tue, 25 Jan 2022 (09:07 IST)
ಡೆಹ್ರಾಡೂನ್ : ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 11 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಮನಗರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರನ್ನು ಕಣಕ್ಕಿಳಿಸಲಿದೆ.
ರಾಜ್ಯದಲ್ಲಿ ಪಕ್ಷ ಪ್ರಚಾರದ ಮುಖ್ಯಸ್ಥರಾಗಿರುವ ಹರೀಶ್ ರಾವತ್ ಅವರು 2017ರ ವಿಧಾನಸಭಾ ಚುನಾವಣೆಯಲ್ಲಿ ಹರಿದ್ವಾರ-ಗ್ರಾಮೀಣ ಮತ್ತು ಕಿಚ್ಚ ವಿಧಾನಸಭಾ ಸ್ಥಾನಗಳಿಗೆ ಸ್ಪರ್ಧಿಸಿ ವಿಫಲರಾಗಿದ್ದರು.
ಶನಿವಾರ ಕಾಂಗ್ರೆಸ್ ತನ್ನ 53 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿಯಲ್ಲಿ 64 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.