Select Your Language

Notifications

webdunia
webdunia
webdunia
webdunia

ಇಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ

ಇಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ
ನವದೆಹಲಿ , ಮಂಗಳವಾರ, 11 ಡಿಸೆಂಬರ್ 2018 (07:22 IST)
ನವದೆಹಲಿ : ಲೋಕಸಭೆಯ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢ, ಮಿಜೋರಾಂ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ.


ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆಯ ಕಾರ್ಯ ಆರಂಭವಾಗಲಿದ್ದು, ಮಧ್ಯಾಹ್ನದ ಹೊತ್ತಿಗೆ ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆ ಇದೆ. ಈಗಾಗಲೇ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ ಬಂದಬಸ್ತ್ ಏರ್ಪಡಿಸಲಾಗಿದೆ.


90 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಛತ್ತೀಸ್ ಗಢದಲ್ಲಿ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ 46. 230 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ 116. 200ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ 101, ತೆಲಂಗಾಣದ ಒಟ್ಟು ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 119 ಆಗಿದ್ದು ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ 60, 40 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಿಜೋರಾಂನಲ್ಲಿ  ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ 21.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕುಖ್ಯಾತ ಅಂತರಾಜ್ಯ ಮನೆ ಕಳ್ಳರ ಬಂಧನ