Select Your Language

Notifications

webdunia
webdunia
webdunia
webdunia

ಎನ್‌ಡಿಎ ಮತ್ತೇ ಅಧಿಕಾರಕ್ಕೆ ಬಂದರೆ ಭವಿಷ್ಯದಲ್ಲಿ ಚುನಾವಣೆ ನಡೆಯಲ್ಲ: ಮಲ್ಲಿಕಾರ್ಜುನ ಖರ್ಗೆ

Mallikarjun Kharge

Sampriya

ಹಜಾರಿಬಾದ್‌ , ಸೋಮವಾರ, 13 ಮೇ 2024 (19:12 IST)
ಹಜಾರಿಬಾದ್‌: ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಪಡೆದರೆ ಮುಂದಿನ ದಿನಗಳಲ್ಲಿ ಯಾವುದೇ ಚುನಾವಣೆಗಳು ನಡೆಯುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, 2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದರೆ ಭವಿಷ್ಯದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಯಾವುದೇ ಚುನಾವಣೆಗಳು ನಡೆಯಲ್ಲ ಎಂದರು.

ಈ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಅವರು ಇಬ್ಬರು ಉದ್ಯಮಿಗಳಿಂದ ಬಾರಿ ಪ್ರಮಾಣದಲ್ಲಿ ಹಣ ಪಡೆದಿದ್ದಾರೆ ಎಂದು ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿ ಅವರು, ಅಧಿಕಾರ ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಬಂಧಿಸಲಾಗಿದೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಬಂಧನಮುಕ್ತಗೊಳಿಸಲಾಗವುದು ಎಂದು ಖರ್ಗೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು: ನಾಳೆ ಜೈಲಿಂದ ಬಿಡುಗಡೆ