Publish Date: Thu, 18 Oct 2018 (07:36 IST)
Updated Date: Thu, 18 Oct 2018 (07:38 IST)
ವಡೋದರ: ಲುಂಗಿ ತೊಟ್ಟುಕೊಂಡು ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಇಂಜಿನಿಯರ್ ಮತ್ತು ನೌಕರರ ಮೇಲೆ ಹಲ್ಲೆ ನಡೆಸಿದ ಘಟನೆ ವಡೋದರಾದಲ್ಲಿ ನಡೆದಿದೆ.
ಇತ್ತೀಚೆಗಿನ ದಿನಗಳಲ್ಲಿ ವಲಸೆ ಬಂದವರ ಮೇಲೆ ಇಲ್ಲಿ ನಡೆಯುತ್ತಿರುವ ಹಲ್ಲೆ ಪ್ರಕರಣಗಳ ಬೆನ್ನಲ್ಲೇ ಈ ಪ್ರಕರಣ ನಡೆದಿದೆ. ಆದರೆ ಇದು ಧ್ವೇಷದ ಹಲ್ಲೆ ಅಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸಿವಿಲ್ ಇಂಜಿನಿಯರ್ ಆಗಿರುವ ಶತ್ರುಘ್ನ ಯಾದವ್ ಎಂಬವರು ತಮ್ಮ ನೌಕರರ ಜತೆ ಕೆಲಸ ಮಾಡುತ್ತಿದ್ದಾಗ ದುಷ್ಕರ್ಮಿಗಳ ಗುಂಪು ಏಕಾಏಕಿ ದಾಳಿ ನಡೆಸಿದೆ. ಇದೀಗ ಪೊಲೀಸರು ಆರೋಪಿಗಳಲ್ಲಿ ಒಬ್ಬಾತನನ್ನು ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.