Select Your Language

Notifications

webdunia
webdunia
webdunia
webdunia

ವಿದ್ಯುತ್ ಸಮಸ್ಯೆ ಬಗೆಹರಿಸದಿದ್ರೆ ಲೈಸೆನ್ಸ್ ಕ್ಯಾನ್ಸಲ್: ಖಾಸಗಿ ಕಂಪೆನಿಗಳಿಗೆ ಕೇಜ್ರಿವಾಲ್ ಎಚ್ಚರಿಕೆ

ವಿದ್ಯುತ್ ಸಮಸ್ಯೆ ಬಗೆಹರಿಸದಿದ್ರೆ ಲೈಸೆನ್ಸ್ ಕ್ಯಾನ್ಸಲ್: ಖಾಸಗಿ ಕಂಪೆನಿಗಳಿಗೆ ಕೇಜ್ರಿವಾಲ್ ಎಚ್ಚರಿಕೆ
ನವದೆಹಲಿ , ಬುಧವಾರ, 25 ಮೇ 2016 (12:16 IST)
ದೆಹಲಿಯಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾದ ಹಿನ್ನೆಲೆಯಲ್ಲಿ ಖಾಸಗಿ ವಿದ್ಯುತ್ ಸರಬರಾಜು ಕಂಪೆನಿಗಳು ವಾರದೊಳಗಾಗಿ ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ಕಂಪೆನಿಗಳಿಗೆ ನೀಡಿರುವ ಲೈಸೆನ್ಸ್ ರದ್ದುಗೊಳಿಸಲು ಸರಕಾರ ಹಿಂಜರಿಯುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಚ್ಚರಿಕೆ ನೀಡಿದ್ದಾರೆ. 
 
ಖಾಸಗಿ ವಿದ್ಯುತ್ ಕಂಪೆನಿಗಳಾದ ಬಿಎಸ್‌ಇಎಸ್, ಟಾಟಾ ಪವರ್ ಪ್ರತಿನಿಧಿಗಳು ಮತ್ತು ಡಿಇಆರ್‌ಸಿ ಮುಖ್ಯಸ್ಥರು ಪಾಲ್ಗೊಂಡಿದ್ದ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್, ಕೂಡಲೇ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಸರಕಾರ ಕಠಿಣ ಕ್ರಮ ತೆಗೆದುಕೊಳ್ಳಲು ಮೀನಾಮೇಷ ಎಣಿಸುವುದಿಲ್ಲ ಎಂದು ಗುಡುಗಿದರು. 
 
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಖಾಸಗಿ ಕಂಪೆನಿಗಳ ವಿದ್ಯುತ್ ಸರಬರಾಜು ಪೈಪೋಟಿಯಿಂದಾಗಿ ವಿದ್ಯುತ್ ಕಣ್ಣು ಮುಚ್ಚಾಲೆಯಾಡುತ್ತಿದ್ದು ಜನತೆಯಿಂದ ಆಕ್ರೋಶ ಎದುರಾಗಿದೆ.
 
ಒಂದು ವಾರದಳೊಗಾಗಿ ವಿದ್ಯುತ್ ಸರಬರಾಜು ಸುಸ್ಥಿತಿಗೆ ಬಾರದಿದ್ದಲ್ಲಿ ಕಠಿಣ ಕ್ರಮ ಎದುರಿಸಲು ಸಿದ್ದರಾಗಿ ಎಂದು ದೆಹಲಿ ಸಿಎಂ ಕೇಜ್ರಿವಾಲ್ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯಪಾನ ನಿಷೇಧದ ನಂತ್ರ ಅಪರಾಧ ಪ್ರಮಾಣದಲ್ಲಿ ಇಳಿಕೆ: ನಿತೀಶ್ ಕುಮಾರ್