Select Your Language

Notifications

webdunia
webdunia
webdunia
webdunia

ಅತ್ಯಾಚಾರ ಪ್ರಕರಣಗಳ ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ಯುಪಿ ಸರ್ಕಾರದಿಂದ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ

ಅತ್ಯಾಚಾರ ಪ್ರಕರಣಗಳ ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ಯುಪಿ ಸರ್ಕಾರದಿಂದ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ
ಲಕ್ನೋ , ಮಂಗಳವಾರ, 10 ಡಿಸೆಂಬರ್ 2019 (07:24 IST)
ಲಕ್ನೋ: ಮಹಿಳೆಯರು ಹಾಗೂ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ  ಅತ್ಯಾಚಾರ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ಉತ್ತರ ಪ್ರದೇಶದ ಸರ್ಕಾರ 218 ಫಾಸ್ಟ್ ಟ್ರ್ಯಾಕ್ ಕೋರ್ಟುಗಳನ್ನು ಸ್ಥಾಪಿಸಲು ನಿರ್ಧಾರ ಮಾಡಿದೆ.



ಉತ್ತರ ಪ್ರದೇಶದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದು, ಮಹಿಳೆಯರು ಹಾಗೂ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ತಡೆಯುವ ಹಾಗೂ ಅತ್ಯಾಚಾರಿಗಳಿಗೆ ತಕ್ಷಣ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಯು.ಪಿ ಸಿಎಂ ಯೋಗಿ ಆದಿತ್ಯನಾಥ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.


ಈ 218 ಕೋರ್ಟುಗಳಿಗೆ 218 ಹೆಚ್ಚುವರಿ ಸೆಷನ್ ಜಡ್ಜ್ ಗಳನ್ನು ನೇಮಿಸಲಾಗುವುದು. ಇದರಲ್ಲಿ 144 ಕೋರ್ಟುಗಳು ಅತ್ಯಾಚಾರ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲಿದೆ. ಉಳಿದ 74 ಕೋರ್ಟುಗಳು ಪೊಕ್ಸೊ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳ ವಿಚಾರಣೆ ನಡೆಸಲಿದೆ. ಹಾಗೇ ಈ ಕೋರ್ಟ್ ನಲ್ಲಿ ತಗಲುವ ವೆಚ್ಚವನ್ನು ಶೇ.60ರಷ್ಟು ಕೇಂದ್ರ ಸರ್ಕಾರ ಭರಿಸಿದರೆ ಇನ್ನು ಶೇ.40ರಷ್ಟು ಯುಪಿ ಸರ್ಕಾರ ಭರಿಸಲಿದೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೋತಿಯ ಡಿಎನ್ ಎ ಹೊಂದಿರುವ ಎರಡು ಹಂದಿಮರಿಗಳ ಜನನ