ಮಾಜಿ ಬಿಜೆಪಿ ಸಂಸದ, ಕ್ರಿಕೆಟಿಗ ನವಜೋತ್ ಸಿಂಗ್ ಸಿದ್ದು ಸೆಪ್ಟೆಂಬರ್ 9 ರಂದು ಹೊಸ ಪಕ್ಷ ಘೋಷಿಸುವುದಾಗಿ ಹೇಳಿಕೆ ನೀಡಿ ಪಂಜಾಬ್ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಎನ್ನುವ ವದಂತಿಗಳಿಗೆ ತೆರೆ ಎಳೆದ ಸಿದ್ದು, ಸೆಪ್ಟೆಂಬರ್ 9 ರಂದು ಲಕ್ಷಾಂತರ ಜನರ ಸಮ್ಮುಖದಲ್ಲಿ ಅವಾಜ್ -ಎ-ಪಂಜಾಬ್ ಹೆಸರಿನ ಪಕ್ಷ ಘೋಷಿಸುವುದಾಗಿ ತಿಳಿಸಿದ್ದಾರೆ.
ಪತ್ನಿ ನವಜೋತ್ ಕೌರ್ ಕೂಡಾ ಹೊಸ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಂಜಾಬ್ ರಾಜ್ಯವನ್ನು ಪ್ರವೇಶಿಸಬಾರದು ಎನ್ನುವ ಬಿಜೆಪಿ ಹೈಕಮಾಂಡ್ ಧಿಕ್ಕರಿಸಿ ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಸಿದ್ದು, ಯಾವ ಪಕ್ಷ ಸೇರಲಿದ್ದಾರೆ ಎನ್ನುವುದು ಬಾರಿ ಚರ್ಚೆಗೆ ಗ್ರಾಸವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ