ನವದೆಹಲಿ: ಕೇಂದ್ರದ ಮಾಜಿ ಗೃಹಸಚಿವ, ಕಾಂಗ್ರೆಸ್ ಹಿರಿಯ ನಾಯಕ ಶಿವರಾಜ್ ಪಾಟೀಲ್ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಶಿವರಾಜ್ ಪಾಟೀಲ್ ಇಂದು ಬೆಳಿಗ್ಗೆ 6.30 ಕ್ಕೆ ತಮ್ಮ ಮಹಾರಾಷ್ಟ್ರದ ಲಾತೂರ್ ನಲ್ಲಿರುವ ಮನೆಯಲ್ಲಿಯೇ ನಿಧನರಾಗಿದ್ದಾರೆ. ಅವರಿಗೆ ಮನೆಯಲ್ಲಿಯೇ ಚಿಕಿತ್ಸೆಎ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
1980 ರಿಂದ 2004 ರವರೆಗೆ ಅವರು ಸಕ್ರಿಯ ರಾಜಕಾರಣದಲ್ಲಿದ್ದರು. ಒಟ್ಟು ಏಳು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಲಾತೂರ್ ಲೋಕಸಭಾ ಕ್ಷೇತ್ರದಿಂದಲೇ ಗೆದ್ದು ಬಂದಿದ್ದರು. 2004 ರಲ್ಲಿ ಇದೇ ಕ್ಷೇತ್ರದಿಂದ ಸೋತ ಬಳಿಕ ಚುನಾವಣೆ ಸ್ಪರ್ಧಿಸಿರಲಿಲ್ಲ.
ಯುಪಿಎ ಸರ್ಕಾರದ ಅವಧಿಯಲ್ಲಿ ಅವರು ಕೇಂದ್ರ ಗೃಹಸಚಿವರಾಗಿ ಕಾರ್ಯನಿರ್ವಹಿಸಿದ್ದರು. 26/11 ರ ಮುಂಬೈ ಉಗ್ರ ದಾಳಿಯ ಸಂದರ್ಭದಲ್ಲೂ ಗೃಹಸಚಿವರಾಗಿದ್ದರು. ಅವರ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕರು ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.