ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ

Krishnaveni K
ಶುಕ್ರವಾರ, 12 ಡಿಸೆಂಬರ್ 2025 (10:02 IST)
Photo Credit: X
ನವದೆಹಲಿ: ಕೇಂದ್ರದ ಮಾಜಿ ಗೃಹಸಚಿವ, ಕಾಂಗ್ರೆಸ್ ಹಿರಿಯ ನಾಯಕ ಶಿವರಾಜ್ ಪಾಟೀಲ್ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಶಿವರಾಜ್ ಪಾಟೀಲ್ ಇಂದು ಬೆಳಿಗ್ಗೆ 6.30 ಕ್ಕೆ ತಮ್ಮ ಮಹಾರಾಷ್ಟ್ರದ ಲಾತೂರ್ ನಲ್ಲಿರುವ ಮನೆಯಲ್ಲಿಯೇ ನಿಧನರಾಗಿದ್ದಾರೆ. ಅವರಿಗೆ ಮನೆಯಲ್ಲಿಯೇ ಚಿಕಿತ್ಸೆಎ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ.

1980 ರಿಂದ 2004 ರವರೆಗೆ ಅವರು ಸಕ್ರಿಯ ರಾಜಕಾರಣದಲ್ಲಿದ್ದರು. ಒಟ್ಟು ಏಳು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಲಾತೂರ್ ಲೋಕಸಭಾ ಕ್ಷೇತ್ರದಿಂದಲೇ ಗೆದ್ದು ಬಂದಿದ್ದರು. 2004 ರಲ್ಲಿ ಇದೇ ಕ್ಷೇತ್ರದಿಂದ ಸೋತ ಬಳಿಕ ಚುನಾವಣೆ ಸ್ಪರ್ಧಿಸಿರಲಿಲ್ಲ.

ಯುಪಿಎ ಸರ್ಕಾರದ ಅವಧಿಯಲ್ಲಿ ಅವರು ಕೇಂದ್ರ ಗೃಹಸಚಿವರಾಗಿ ಕಾರ್ಯನಿರ್ವಹಿಸಿದ್ದರು. 26/11 ರ ಮುಂಬೈ ಉಗ್ರ ದಾಳಿಯ ಸಂದರ್ಭದಲ್ಲೂ ಗೃಹಸಚಿವರಾಗಿದ್ದರು. ಅವರ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕರು ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬಣಕ್ಕೆ ಸೆಡ್ಡು ಹೊಡೆಯಲು ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಡಿಕೆ ಶಿವಕುಮಾರ್ ಮೇಲೆ ಹೈಕಮಾಂಡ್ ಇಂಪ್ರೆಸ್ ಮಾಡಲು ಇದೊಂದು ವಿಷಯ ಸಾಕು

ಸಿದ್ದು ಡಿಕೆಶಿ ನಡುವೆ ತಣ್ಣಗಾಗಿದ್ದ ಸಿಎಂ ಕುರ್ಚಿ ಫೈಟ್ ಮತ್ತೆ ಭುಗಿಲೇಳಲು ಈ ಒಬ್ಬರೇ ಕಾರಣ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ ಇಲ್ಲಿದೆ ವರದಿ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ಮುಂದಿನ ಸುದ್ದಿ
Show comments