ಮನಿ ಲ್ಯಾಂಡಿಂಗ್ ತನಿಖೆ‌‌ ಎಂದು ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ₹30.99 ಲಕ್ಷ ದೋಖಾ

Sampriya
ಮಂಗಳವಾರ, 9 ಸೆಪ್ಟಂಬರ್ 2025 (21:43 IST)
ಔರಾದ್: ಮನಿ ಲ್ಯಾಂಡಿಂಗ್‌ ಕೇಸಿನಲ್ಲಿ ನೀವು ಭಾಗಿಯಾಗಿದ್ದಿರಿ  ಎಂದು ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರ ಬ್ಯಾಂಕ್ ಖಾತೆಯಿಂದ ₹30.99 ಲಕ್ಷ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಮಾಜಿ ಶಾಸಕರ ವಕೀಲರು ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ.

ಆಗಸ್ಟ್  12ರಂದು ತಮ್ಮ ಬ್ಯಾಂಕ್ ಖಾತೆಯಿಂದ ₹ 30.99 ಲಕ್ಷ ಅಕ್ರಮವಾಗಿ ದೋಚಲಾಗಿದೆ. ಇದರ ಹಿಂದೆ ಮುಂಬೈ ಮೂಲದ ಸಂದೀಪಕುಮಾರ ಹಾಗೂ ನೀರಜ್ ಕುಮಾರ ಅವರ ಕೈವಾಡವಿದೆ ಎಂದು ಆರೋಪಿಸಿದ್ದಾರೆ. 


ಅವರ ವಿರುದ್ಧ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಬ್ಯಾಂಕ್ ವಹಿವಾಟು ಪರಿಶೀಲಿಸುತ್ತಿದ್ದಾರೆ.

ಆ. 12ರಂದು ಅಪರಿಚಿತ ವ್ಯಕ್ತಿಯೊಬ್ಬ ಗುಂಡಪ್ಪ ಅವರಿಗೆ ಕರೆ ಮಾಡಿ,  ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ನರೇಶ್ ಗೋಯಿಲ್  ಮನಿ ಲ್ಯಾಂಡಿಂಗ್‌ ಕೇಸಿನಲ್ಲಿ ನೀವು ಭಾಗಿಯಾಗಿದ್ದಿರಿ. 

 ಜಪ್ತಿ ಮಾಡಲಾದ ವಸ್ತುಗಳಲ್ಲಿ ನಿಮ್ಮ  ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಗಳು ಸಿಕ್ಕಿವೆ. ಸಾಕಷ್ಟು ಅವ್ಯವಹಾರ ನಡೆಸಿದ್ದೀರಿ ಎಂದು ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ  ಹಂತ ಹಂತವಾಗಿ ಹಣ ವಂಚಿಸಲಾಗಿದೆ ಎಂದು ವಕೀಲರು ದೂರಿನಲ್ಲಿ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments