ಎಚ್. ವಿಶ್ವನಾಥ್ ಜೆಡಿಎಸ್ ಸೇರ್ಪಡೆ ದಿನಾಂಕ ಫಿಕ್ಸ್?

Webdunia
ಮಂಗಳವಾರ, 23 ಮೇ 2017 (20:10 IST)
ಮಾಜಿ ಸಂಸದ ಎಚ್. ವಿಶ್ವನಾಥ್ ಜೆಡಿಎಸ್ ಸೇರಲಿರುವ ಡೇಟ್ ಫಿಕ್ಸ್ ಆಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಜೂನ್ 7ಕ್ಕೆ ಮೈಸೂರಿನಲ್ಲಿ ಸಮಾವೇಶ ನಡೆಸಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಸುದ್ದಿಯಾಗಿದೆ. ಅಷ್ಟೇ್ಲಿ ಅಲ್ಲ, ಹುಣಸೂರು ಕ್ಷೇತ್ರದಿಂದ ಟಿಕೆಟ್ ನೀಡುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಚ್. ವಿಶ್ವನಾಥ್, ನಾನಿನ್ನೂ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಪಕ್ಷಕ್ಕೆ ರಾಜೀನಾಮೆ ನೀಡಿದ ಬಳಿಕವಷ್ಠೇ ಆ ಪ್ರಶ್ನೆ ಏಳಲಿದೆ. ಎರಡ್ಮೂರು ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.

ಇತ್ತೀಚೆಗಷ್ಟೇ, ಸಿಎಂ ಸಿದ್ದರಾಮಯ್ಯ ನಾನು ಕಾಂಗ್ರೆಸ್ ಪಕ್ಷ ಸೇರಲು ಯಾವುದೇ ನಾಯಕರು ಕಾರಣವಲ್ಲ ಎಂದು ಹೇಳಿದ್ದರು. ಇದು ವಿಶ್ವನಾಥ್ ಅವರಿಗೆ ಭಾರೀ ನೋವುಂಟುಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇನ್ನೂ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮೂರೂ ಪಕ್ಷಗಳಲ್ಲಿ ಅತೃಪ್ತರ ಮೇಲಾಟ ಜೋರಾಗಿದ್ದು, ಚುನಾವಣೆ ವೇಳೆಗೆ ಯಾರ್ಯಾರು ಯಾವ ಪಕ್ಷದಲ್ಲಿರುತ್ತಾರೆ ಎಂಬುದನ್ನ ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಮುಂದಿನ ಸುದ್ದಿ
Show comments